ಆಫ್ರಿಕನ್-ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿಸಿ ಅಮೆರಿಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ಪ್ರತಿಭಟನೆಯ ಸಂದಭದಲ್ಲಿ ಭಾರತೀಯ ರಾಯಭಾರಿ ಕಚೇರಿ ಹೊರಗೆ ಸ್ಥಾಪಿಸಲಾಗಿರುವ ಗಾಂಧೀಜಿ ಪ್ರತಿಮೆಗೆ ಹಾನಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ದುಷ್ಕೃತ್ಯ ನಡೆಸಿದವರ ಪತ್ತೆಗೆ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಅಮೆರಿಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಳೆದಿದ್ದು, ಒಂದು ರೀತಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
Be the first to comment