LKG / UKG ಆನ್‌ ಲೈನ್‌ ಪಾಠವಿಲ್ಲ -ಶಿಕ್ಷಣ ಸಚಿವ ಸುರೇಶಕುಮಾರ

ಬೆಂಗಳೂರು: ಆನ್‍ಲೈನ್  ಶಿಕ್ಷಣ ನೀಡುವ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಿದೆ. ಆನ್ ಶಿಕ್ಷಣದ ದುಷ್ಪರಿಣಾಮ ಮತ್ತು ಒಳಿತಿನ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದ್ದು, ಮುಂಬರುವ ಜೂ.8 ರಂದು ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿ, ಯಾವ ತರಗತಿಗಳಿಗೆ ಆನ್‌ ಲೈನ್‌ ಶಿಕ್ಷಣ ನೀಡಬೇಕು ಎಂಬ ಬಗ್ಗೆ ಸರ್ಕಾರ ಆದೇಶ ನೀಡಲಿದೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ ತಿಳಿಸಿದರು.

ಎಲ್‍ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಆನ್  ಶಿಕ್ಷಣ ನೀಡಬಾರದೆಂಬುದು ಈಗಾಗಲೇ ಸರಕಾರದ ನಿರ್ಧಾರವಾಗಿದೆ. ಆದರೆ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ ಇಲ್ಲವೇ ಕಾಲೇಜು ಮಟ್ಟದಿಂದ ಆನ್‍ಲೈನ್ ತರಗತಿಗಳನ್ನು ಆರಂಭಿಸುವ  ಮುನ್ನ ತೆಗೆದುಕೊಳ್ಳುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.

ಶೈಕ್ಷಣಿಕ ವರ್ಷವನ್ನು ಆರಂಭಿಸುವ ಕುರಿತು ಇದುವರೆಗೆ ಕೇಂದ್ರ ಸರಕಾರ ಅನುಮತಿ ನೀಡಿಲ್ಲ. ಆದರೂ ರಾಜ್ಯ ಸರಕಾರ ಮಕ್ಕಳ, ಪಾಲಕ ಪೋಷಕರ ಅಭಿಪ್ರಾಯ ಪಡೆದು ಈ ಬಗ್ಗೆ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸುರೇಶ ಕುಮಾರ ತಿಳಿಸಿದ್ದಾರೆ.

About ಬಿ.ಎನ್‌. ವಾಸರೆ 704 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*