ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ(39) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ ಅವರು ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ 22ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಸಿದ್ದರು.
ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಮೃತದೇಹ ಇಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪೋಲೀಸ್ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಅಪೊಲೊ ಆಸ್ಪತ್ರೆ ಮೂಲಗಳ ಮಾಹಿತಿ ನೀಡಿವೆ.
Be the first to comment