ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೂರು ಕಂತುಗಳಲ್ಲಿ 5,000 ರು.

ಬೆಂಗಳೂರು: ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೂರು ಕಂತುಗಳಲ್ಲಿ ಒಟ್ಟು 5,000 ರೂ ಧನ ಸಹಾಯವನ್ನು ನೇರ ನಗದು ವರ್ಗಾವಣೆಯ ಮೂಲಕ ಒದಗಿಸುವ ಯೋಜನೆ ಜಾರಿಯಲ್ಲಿದ್ದು, ಮೊದಲ ಜೀವಂತ ಹೆರಿಗೆಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ.

ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಪರ್ಕ ಹೊಂದಿರುವ ಉಳಿತಾಯ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಈಗಾಗಲೇ ನಮೂನೆ 1-ಎ ಮತ್ತು 1-ಬಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ನಮೂನೆ 1-ಸಿ ಅರ್ಜಿಯನ್ನೂ ಸಹ ಫಲಾನುಭವಿ ಮತ್ತು ಪತಿಯ ಆಧಾರ್ ಕಾರ್ಡ್ ಪ್ರತಿ, ತಾಯಿಕಾರ್ಡ್ ಪ್ರತಿ, ಆಧಾರ್ ಲಿಂಕ್ ಬ್ಯಾಂಕ್‍ನ ಉಳಿತಾಯ ಖಾತೆ ಪ್ರತಿಗಳೊಂದಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ನಿಗಧಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

About ಬಿ.ಎನ್‌. ವಾಸರೆ 620 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*