ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕಳುಹಿಸಲು ವಿಪಕ್ಷೀಯರಿಂದಲೂ ಒತ್ತಡ-ಡಿಕೆಶಿ

ಬೆಂಗಳೂರು: ಕಳೆದ ಐದು ವರ್ಷಗಳ ಕಾಲ ಸಂಸತ್ತಿನ ವಿರೋಧ ಪಕ್ಷದ ನಾಯಕನಾಗಿ ಸಮರ್ಥವಾಗಿ ಕಾರ್ಯ ನಿರ್ಹಿವಸಿದ ಮಲ್ಲಿಕಾರ್ಜುನ್‌ ಖರ್ಗೆಯವರು ರಾಷ್ಟ್ರೀಯ ನಾಯಕರಾಗಿದ್ದಾರೆ, ಹಾಗಾಗಿ ಅವರನ್ನು ರಾಜ್ಯಸಭೆಗೆ ಕಳಿಸಲು ನಮ್ಮ ಪಕ್ಷದವರಷ್ಟೇ ಅಲ್ಲ. ವಿಪಕ್ಷದಲ್ಲಿರುವ ಬೇರೆ ಬೇರೆ ರಾಜ್ಯಗಳ ನಾಯಕರೂ ಸಹ ಸಹಮತ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು.

ಅವರು ಕೆ.ಪಿ.ಸಿ.ಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟ್ರ ನಾಯಕರಾಗಿದ್ದಾರೆ. ಅವರ ಅನುಭವವಕ್ಕೆ ಪರ್ಯಾಯವಿಲ್ಲ..

ರಾಜ್ಯ ಸಭೆಗೆ ನಮ್ಮ ರಾಜ್ಯದಿಂದ ಆಯ್ಕೆಯಾಗುವ ಮಲ್ಲಿಕಾರ್ಜುನ ಖರ್ಯಗೆವರು ಎಲ್ಲ ವರ್ಗದ ನಾಯಕರಾಗಿ ಪ್ರತಿನಿಧಿಸಲಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಟ್ಟ ಸೋನಿಯಾ ಗಾಂಧಿಯವರಿಗೂ ನಾವು ಅಭಿನಂದಿಸುತ್ತೇವೆ ಎಂದರು

ರಾಜ್ಯಸಭೆ ಚುನಾವಣೆಯಲ್ಲಿ ದೇವೇಗೌಡರನ್ನು ಬೆಂಬಲಿಸುವ ವಿಚಾರವಾಗಿ ಪ್ರಶ್ನಿಸಿದಾಗ ಉತ್ತರಿಸಿದ ಅವರು ಈ ವಿಚಾರವಾಗಿ ಪಕ್ಷದ ರಾಷ್ಟ್ರೀಯ ನಾಯಕಿ ಸೋನಿಯಾಂ ಗಾಂಧಿಯವರು ಯಾವ ನಿರ್ದೇಶನ ನೀಡುತ್ತಾರೋ ಹಾಗೆ ಮಾಡುತ್ತೇವೆಂದರು.

About ಬಿ.ಎನ್‌. ವಾಸರೆ 583 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*