ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಗಸ್ತಿ ಅವರು ಇಲ್ಲಿ ಇಂದು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ಅವರಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಶ್ರೀ ಸಿ ಟಿ ರವಿ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.