ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ ಜೆ.ಪಿ ಭವನಕ್ಕೆ ಭೇಟಿ ನೀಡಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮನವಿ ಮೇರೆಗೆ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಶಾಸಕ ಹೆಚ್ ಡಿ ರೇವಣ್ಣ, ಬಂಡೆಪ್ಪ ಕಾಂಶಪೂರ ಹಾಗೂ ಇನ್ನಿತರರು ಇದ್ದರು.