ಮಂಡ್ಯದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರರಿಗೆ ಸನ್ಮಾನ

ಮಂಡ್ಯ : ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಮಂಡ್ಯ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿದರು.

ಸಚಿವರು ಈ ಸಂದರ್ಭದಲ್ಲಿ ಹಿರಿಯ ನಾಯಕರಾದ ದಿವಂಗತ ಅನಂತಕುಮಾರ ಅವರೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ ಸಂದರ್ಭವನ್ನು ಸ್ಮರಿಸಿದರು. ಹಾಗೂ ಮಂಡ್ಯ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ಸಚಿವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ನಾರಾಯಣ ಗೌಡ ಮಂಡ್ಯ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.

About ಬಿ.ಎನ್‌. ವಾಸರೆ 583 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*