ದಾಂಡೇಲಿ: ಅಕ್ರಮ ಉಸುಕು ಸಾಗಾಟ ತಡೆಗೆ ಆಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು ಇದೀಗ ಬರ್ಚಿ ಚೆಕ್ ಪೋಸ್ಟ್‍ನಲ್ಲಿ ಸಿಸಿ ಟಿವಿ ಕ್ಯಾಮರಾ ಕಣ್ಗಾವಲು ಇಡಲಾಗಿದೆ.
ಹಿಂದೆ ಅಕ್ರಮ ಉಸುಕು ಸಾಗಾಟದ ತಡೆಯುವ ನಿಟ್ಟಿನಲ್ಲಿ ಕಂದಾಯ, ಅರಣ್ಯ, ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯನ್ನೊಳಗೊಂಡಂತೆ ಸಿಬ್ಬಂದಿಗಳನ್ನು ನೇಮಿಸಿ ಸಿಸಿ ಟಿವಿ ಅಳವಡಿಸಲಾಗಿತ್ತು. ಕೆಲದಿನಗಳಿಂದ ಈ ಸಿಸಿ ಕ್ಯಾಮರಾ ಕೆಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಈಗ ಮತ್ತೆ ಅಕ್ರಮ ಉಸುಕು ಸಾಗಾಟದ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಹಿನ್ನಲೆಯಿಂದ ಜಿಲ್ಲಾಡಳಿತ ಅದರ ತಡೆಗೆ ಮುಂದಾಗಿತ್ತು. ಸ್ಥಳೀಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ನಿರ್ದೇಶಿಸಿತ್ತು. ಅದರ ಹಿನ್ನೆಲೆಯಲ್ಲಿ ಈಗಾಗಲೇ ಉಸುಕು ಸಾಗಾಟ ಸ್ಥಗಿತವಾಗಿದ್ದು, ಅದರ ಮುಂದುವರೆದ ಭಾಗವಾಗಿ ಇದೀಗ ಬರ್ಚಿ ಚೆಕ್ ಪೋಸ್ಟ್‍ನಲ್ಲಿ ಸಿಸಿ ಟಿವಿ ಕ್ಯಾಮರಾವನ್ನೂ ಅಳವಡಿಸಲಾಗಿದೆ ಎಂದು ತಹಶಿಲ್ದಾರ ಶೈಲೇಶ ಪರಮಾನಂದ ತಿಳಿಸಿದ್ದಾರೆ.