ದಾಂಡೇಲಿ : ರಾಜ್ಯ ಸರಕಾರ ಕರೆ ನೀಡಿದಂತೆ ದಾಂಡೇಲಿ ನಗರಸಭೆಯಲ್ಲಿ ಮಾಸ್ಕ್ ದಿನ ಹಾಗೂ ಜಾಗೃತಿ ಜಾಥಾವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತ ಡಾ. ಸಯ್ಯದ್ ಜಾಹೇದ್ ಅಲಿ ಕೋವಿಡ್-19ನಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಹಾಗೂ ಇತರರನ್ನು ರಕ್ಷಿಸಲು ಮಾಸ್ಕ್ ಧಾರಣೆಯಿಂದ ಸಾದ್ಯ, ಆದ್ದರಿಂದ ಪ್ರತಿಯೊಬ್ಬರು ಕೋವಿಡ್ ಸೋಂಕನ್ನು ನಿಯಂತ್ರಿಸಲು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯವಾಗಿವೆ. ಇದರಿಂದ ಕೊರೊನಾ ಸೋಂಕಿನಿಂದ ತಮ್ಮನ್ನು ಮತ್ತು ಇತರರನ್ನು ರಕ್ಷಿಸಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ದಾಂಡೇಲಿ ತಹಶೀಲ್ದಾರ ಶೈಲೇಶ ಪರಮಾನಂದ, ನಗರ ಸಭಾ ಸದಸ್ಯರುಗಳು, ಸಿಬ್ಬಂದಿಗಳು, ರೋಟರಿ ಕ್ಲಬ್, ಲಾಯನ್ಸ್ ಕ್ಲಬ್ ಪದಾಧಿಕಾರಿಗಳು, ಶಾಲಾ ಕಾಲೇಜುಗಳ ಮುಖ್ಯಸ್ಥರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು.