Site icon ಒಡನಾಡಿ

ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ದಿಶಾ ಸಮಿತಿ ಸಭೆ

ಕಾರವಾರ: ‌ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅಧ್ಯಕ್ಷತೆಯಲ್ಲಿ ಗುರುವಾರ ದಿಶಾ ಸಮಿತಿ ಸಭೆ ನಡೆಯಿತು.

ಜೇನು ಪೆಟ್ಟಿಗೆ ತರಬೇತಿಯನ್ನು ಮೂರು ನಾಲ್ಕು ದಿನದ ಕಾರ್ಯಾಗಾರ ನಡೆಸಬೇಕು. ಇದನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅಭಿವೃದ್ಧಿ ಪಡಿಸಬೇಕು. ಕಾಡಿನಲ್ಲಿ ಜೇನು ಮರಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಅದನ್ನು ಹೆಚ್ಚಾಗಿ ಬೆಳೆಸಬೇಕು. ಆಯುಷಮಾನ್‌ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ನ್ನು ಹೆಚ್ಚಿನ ಜನರಿಗೆ ತಲುಪುವಂತೆ ಮಾಡಬೇಕು. ಜಿಲ್ಲೆ ಹಾಗೂ ತಾಲ್ಲೂಕಿನ ಜನರಲ್ಲಿರುವ ಕೌಶಲಗಳನ್ನು ಹುಡುಕಿ ಅವರಿಗೆ ಯಾವ ಕೌಶಲ ಅವಶ್ಯಕತೆ ಇದೆ ಎಂದು ಗಮನಿಸಿ ತರಬೇತಿ ನೀಡುವಂತೆ ಸಂಸದರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕಾರವಾರ ಶಾಸಕಿ ರೂಪಾಲಿ ನಾಯ್ಕ, ಭಟ್ಕಳ ಶಾಸಕ ಸುನೀಲ ನಾಯ್ಕ, ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version