ದಾಂಡೇಲಿಯಲ್ಲಿ ಶನಿವಾರ 22 ಜನರಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿರುವ ಮಾಹಿತಿ ಲಭ್ಯವಾಗಿದ್ದು, ಇದರಿಂದಾಗಿ ದಾಂಡೇಲಿಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದಂತಾಗಿದೆ.
ಶನಿವಾರದ ವರದಿಯಂತೆ ದಾಂಡೇಲಿಯ ಸರಕಾರಿ ಆಸ್ಪತ್ರೆಯ ಕೆಲ ಸಿಬ್ಬಂದಿಗಳಿಗೂ ಪಾಸಿಟಿವ್ ಬಂದಿರುವ ಮಾಹಿತಿಯಿದೆ. ಜೊತೆಗೆ ವೆಸ್ಟಕೋಸ್ಟ ಪೇಪರ್ ಮಿಲ್ ನೊಳಗಿನ ಕೆಲ ಕಾರ್ಮಿಕರಲ್ಲಿಯೂ ಸಹ ಶನಿವಾರ ಸೋಂಕು ದೃಢವಾಗಿದೆ ಎನ್ನಲಾಗಿದೆ. ಉಳಿದ ಪ್ರಕರಣಗಳ ಮಾಹಿತಿ ಗೊತ್ತಾಗಬೇಕಿದೆ.
ದಾಂಡೇಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ಬಾರಿಸಿದಂತಾಗಿದ್ದು, ದಿನೇ ದಿನೇ ಹೆಚ್ಚುತ್ತಿರುವ ಪಾಸಿಟಿವ್ ಪ್ರಕರಣಗಳಿಂದಾಗಿ ಜನ ಆತಂಕಕ್ಕೊಳಗಾಗುತ್ತಿದ್ದಾರೆ.