ಎಸ್.ಎಸ್.ಎಸ್.ಎಲ್.ಸಿ ಪರೀಕ್ಷೆಯ ಪಲಿತಾಂಶ ಪ್ರಕಟವಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಈಕೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.
625 ರಲ್ಲಿ 625 ಅಂಕಗಳನ್ನು ಪಡೆದುಕೊಂಡ ಸನ್ನಧಿ ಹೆಗಡೆ ಸರಕಾರಿ ಪ್ರೌಢ ಶಾಲೆಯಲ್ಲಿ ಓದಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ.
ಇನ್ನು ಜಿಲ್ಲಾವಾರು ಪಲಿತಾಂಶದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ʼಎʼ ಗ್ರೇಡ್ ಬಂದಿದ್ದರೆ, ಶಿರಸಿ ಶೈಕ್ಷಣಿಕ ಜಿಲ್ಲೆʼಬಿʼಗ್ರೇಡ್ ಪಡೆದುಕೊಂಡಿದೆ.