ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಹಳಿಯಾಳ ಕ್ಷೇತ್ರದ ಮಾಜಿ ಶಾಸಕ ಸುನೀಲ್ ಹೆಗಡೆ ನೇಮಕ ಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಿಂದ ಇಬ್ಬರನ್ನು ರಾಜ್ಯ ಕಾರ್ಯಕಾರಿ ಸಮಿತಿಗೆ ನೇಮಕ ಗೊಂಡಿದ್ದು ಭಾ.ಜ.ಪ. ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಮತ್ತೋರ್ವರಾಗಿದ್ದಾರೆ.
ಸುನೀಲ ಹೆಗಡೆಯವರ ನೇಮಕಕ್ಕೆ ಹಳಿಯಾಳ-ದಾಂಡೇಲಿ-ಜೊಯಿಡಾದ ಭಾ.ಜ.ಪ. ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಒಡನಾಡಿ ಜೊತೆ ಮಾತನಾಡಿರುವ ಸುನೀಲ ಹೆಗಡೆಯವರು ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿಷ್ಠೆ ಯಿಂದ ನಿರ್ವಹಿಸುವುದಾಗಿ ತಿಳಿಸಿದ್ದಾರೆ.
Be the first to comment