Site icon ಒಡನಾಡಿ

ಇಂದಿನಿಂದ ರಾಜ್ಯದಲ್ಲಿ ಮತ್ತೆ ‌ ನೈಟ್ ಕರ್ಫ್ಯೂ ಜಾರಿ

ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಅವರು ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್ ಸಾಂಕ್ರಾಮಿಕ ವನ್ನು‌ ಪರಿಣಾಮಕಾರಿಯಾಗಿ ತಡೆಗಟ್ಟುವ‌ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಬುಧವಾರ ರಾತ್ರಿಯಿಂದಲೇ ನೈಟ್‌ ಕರ್ಫ್ಯೂ ಜಾರಿಗೆ ಬರಲಿದೆ. ರಾತ್ರಿ ಹತ್ತು ಗಂಟೆಯಿಂದ ಮರುದಿನ ಬೆಳಿಗ್ಗೆ ಆರು ಗಂಟೆಯವರೆಗೆ ನೈಟ್‌ ಕರ್ಫ್ಯೂ ಇರಲಿದೆ. ವಿದೇಶದಿಂದ ಆಗಮಿಸಿದವರಿಗೆ RTPCR ಪರೀಕ್ಷೆ ಕಡ್ಡಾಯವಾಗಿದೆ ಎಂದಿದ್ದಾರೆ.

ಈ ಸಂದರ್ಭ ಹಾಲು, ತರಕಾರಿ, ಔಷಧಿ ವಿತರಣೆಗೆ ಯಾವುದೇ ನಿರ್ಬಂಧವಿಲ್ಲ. ಹಾಗೂ ಮೆಡಿಕಲ್‌ ಸ್ಟೋರ್‌ ಮತ್ತು ಆಸ್ಪತ್ರೆಗಳಿಗೂ ವಿನಾಯ್ತಿ ನೀಡಲಾಗಿದೆ. ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಬಾರುಗಳು ಬಂದ್ ಇರಲಿವೆ. ಕ್ರಿಸ್‌ಮಸ್‌ ಹಾಗೂ ಹೊಸವರ್ಷ ಸಂಭ್ರಮಾಚರಣೆಗೆ ಕೂಡ ಬ್ರೇಕ್‌ ಹಾಕಲಾಗಿದೆ.

ಇಂದು ಆರಂಭವಾಗುವ ನೈಟ್‌ ಕರ್ಫ್ಯೂ, 2021ರ ಜನವರಿ ಎರಡು ತಾರೀಕಿನವರೆಗೂ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ ಇನ್ನಿತರರು ಇದ್ದರು.

Exit mobile version