ಇನ್ನು ಮುಂದೆ ಕರ್ನಾಟಕ ರಾಜ್ಯದ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಫೋಟೊ ಅಥವಾ ವಿಡಿಯೋಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಅನುಮತಿ ಇಲ್ಲದೆ ಮಾಡುವಂತಿಲ್ಲ…
ಹೀಗೆಂದು ರಾಜ್ಯ ಸರ್ಕಾರದ ಆದೇಶ ಹೊರಬಂದಿದೆ . ರಾಜ್ಯ ಪಾಲರ ಆದೇಶದನ್ವಯ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ವೆಂಕಟೇಶಪ್ಪ ರವರು ಈ ಸುತ್ತೋಲೆಯನ್ನು ಹೊರಡಿಸಿದ್ದಾರೆ . ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಧ ಅಧ್ಯಕ್ಷರು ನೀಡಿದ ಮನವಿಯ ಹಿನ್ನೆಲೆಯಲ್ಲಿ ಈ ಹೊಸ ಆದೇಶ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ರಾಜ್ಯದ ಎಲ್ಲೆಡೆಯ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಹಾಗೂ ಇನ್ನಿತರರು ಕೆಲಸಕಾರ್ಯಗಳಿಗೆ ಬರುವ ಸಂದರ್ಭದಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದು ಹಾಗೂ ಕೆಲವರು ಫೋಟೋ ಮತ್ತು ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಇದು ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಹಾಗೂ ಅದರಲ್ಲೂ ಮಹಿಳಾ ಸಿಬ್ಬಂದಿಗಳಿಗೆ ಹೆಚ್ಚು ಕಿರಿಕಿರಿಯಾಗುತ್ತಿದೆ ಕೆಲವೊಮ್ಮೆ ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ .
ಸರಕಾರದ ಈ ಆದೇಶದ ಬಗ್ಗೆ ರಾಜ್ಯದಲ್ಲಿ ಜನವಲಯದಿಂದ ಪರ- ವಿರೋಧದ ಮಾತುಗಳು ಕೇಳಿ ಬರುತ್ತಿವೆ. ಬೇಕು- ಬೇಡಗಳ ಚರ್ಚೆಯಾಗುತ್ತಿದೆ.
ಸರಕಾರದ ಆದೇಶ ಪತ್ರ ನೋಡಿ
Be the first to comment