ಕನ್ನಡ ಸಾಹಿತ್ಯ ಪರಿಷತ್ತು ೨೦೨೨-೨೩ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆಅರ್ಜಿಗಳನ್ನು ಆಹ್ವಾನಿಸಿದೆ.
೨೦೨೨ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನಾಂಕವಾಗಿದೆ. ಸೆಪ್ಟೆಂಬರ್ ೧೫ರವರೆಗೆ ದಂಡ ಶುಲ್ಕ ರೂ.೫೦-೦೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ.೨೫-೦೦ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಆದರೆ ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.೨೫ ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ ಬೆಂಗಳೂರು-೧೮, ದೂರವಾಣಿ ಸಂಖ್ಯೆ ೦೮೦-೨೬೬೨೩೫೮೪, ೨೬೬೧೨೯೯೧ ಇವರನ್ನು ಸಂಪರ್ಕಿಸಬಹುದಾಗಿದೆ.
ಕನ್ನಡ ರತ್ನ ಪರೀಕ್ಷೆಗೆ ಸರ್ಕಾರ ಮನ್ನಣೆ ನೀಡಿದ್ದು, ಪದವೀಧರರಾಗಿದ್ದು ಕನ್ನಡ ರತ್ನ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯಗಳು ಕನ್ನಡ ಎಮ್.ಎ. ಗೆ ಪ್ರವೇಶಾವಕಾಶ ಕಲ್ಪಿಸಿವೆ. ಇಲಾಖಾ ಭಾಷಾ ಪರೀಕ್ಷೆಯಿಂದಲೂ ವಿನಾಯಿತಿ ಇದ್ದು ಕನ್ನಡ ಸಾಹಿತ್ಯ ಪರಿಷತ್ತಿನ ಕಾವ ಅಥವಾ ಜಾಣ ಅಥವಾ ರತ್ನ ಪರೀಕ್ಷೆಗಳಿಗೆ ಕುಳಿತು ತೇರ್ಗಡೆಯಾದ ಕರ್ನಾಟಕ ಸರ್ಕಾರದ ಅಧಿಕಾರಿಗಳು ಮತ್ತು ನೌಕರರಿಗೆ ಇಲಾಖೆಯಿಂದ ಗೊತ್ತು ಮಾಡಿರುವ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ದೊರೆಯುತ್ತದೆ ಎಂದು ತಿಳಿಸಿರುವ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆಯವರು ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.