Site icon ಒಡನಾಡಿ

ಕರ್ತವ್ಯದ ಅವಧಿಯಲ್ಲಿ ಲೋಪವಾಗದಿರಲಿ: ಸರಕಾರಿ ನೌಕರರಿಗೆ ಕಟ್ಟು ನಿಟ್ಟಿನ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ತಮ್ಮ ತಮ್ಮ ಕಚೇರಿಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಯಾವುದೇ ರೀತಿಯ ಲೋಪ ಎಸಗದೆ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸತಕ್ಕದ್ದು ಎಂದು ರಾಜ್ಯ ಸರ್ಕಾರ ಕಟ್ಟುನಿಟ್ಟಾದ ಆದೇಶವನ್ನು ಹೊರಡಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾರವರು ರಾಜ್ಯ ಸರ್ಕಾರದ ಕಛೇರಿಗಳಲ್ಲಿ ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಾರ್ಯನಿಷ್ಠೆಯನ್ನು ತೋರಲು ಈಗಾಗಲೇ ಸರ್ಕಾರವು ಸಾಕಷ್ಟು ಸುತ್ತೋಲೆಗಳಲ್ಲಿ ಸೂಚನೆಗಳನ್ನು ನೀಡಿದೆ.

ಆದಾಗ್ಯೂ, ಸರ್ಕಾರಿ ನೌಕರರು/ಅಧಿಕಾರಿಗಳಲ್ಲಿ ಸಮಯ ಪ್ರಜ್ಞೆ ಮತ್ತು ಕಾರ್ಯನಿಷ್ಠೆಯ ಕೊರತೆಯನ್ನು ಇತ್ತೀಚಿನ ದಿನಗಳಲ್ಲಿ ಅವಲೋಕಿಸಲಾಗಿದೆ. ಸಾರ್ವಜನಿಕರು ದೂರದ ಸ್ಥಳಗಳಿಂದ ಸರ್ಕಾರಿ ಕಛೇರಿಯಲ್ಲಿನ ತಮ್ಮ ಕಾರ್ಯಗಳಿಗೆ ಬೆಳಗ್ಗೆ ನಿಗದಿತ ಅವಧಿಗೆ ಸರ್ಕಾರದ ಕಛೇರಿಗಳಿಗೆ ಭೇಟಿ ನೀಡಿದಾಗ ಬಹುತೇಕ ಕಛೇರಿಗಳಲ್ಲಿ ಸಿಬ್ಬಂದಿಗಳು/ ಅಧಿಕಾರಿಗಳು ಕಛೇರಿಗೆ ಹಾಜರಾಗಿಲ್ಲದೇ ಇರುವ ಕಾರಣ ಸಾಮಾನ್ಯ ಜನರು ಬವಣೆ ಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರದ ಕಛೇಲಿಯ ಪ್ರಾರಂಭದ ಸಮಯ ಬೆಳಗ್ಗೆ 10 ಗಂಟೆಗೆ ಕಡ್ಡಾಯವಾಗಿ ಹಾಜರಾಗುವುದು ಹಾಗೂ ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು, ಕರ್ತವ್ಯ ನಿರ್ವಹಿಸತಕ್ಕದ್ದು.

ಕಛೇರಿ ಅವಧಿಯಲ್ಲಿ ನೌಕರರು/ಅಧಿಕಾಲರಿಗಳು, ಅನ್ಯ ಕರ್ತವ್ಯದ ಮೇರೆಗೆ ತೆರಳಬೇಕಾಗಿದ್ದಲ್ಲಿ ಚಲನ-ವಲನ ವಹಿಯಲ್ಲಿ ಸಕಾರಣವನ್ನು ನಮೂದಿಸಿ, ಮೇಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ನಿಗದಿತ ಕಾಲಾವಧಿಗಿಂತ ಬಿಳಂಬವಾಗಿ ಹಾಜರಾಗುವ ಹಾಗೂ ಕಛೇರಿ ಅವಧಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದ /ಚಲನ-ವಲನ ವಹಿಯಲ್ಲಿ ನಮೂದಿಸದ, ಮೇಲಾಧಿಕಾರಿಗಳ ಅನುಮತಿ ಪಡೆಯದ ನೌಕರರು/ಅಧಿಕಾರಿಗಳ ವಿರುದ್ಧ ಸಕ್ಷಮ ಪ್ರಾಧಿಕಾರವು ಸೂಕ್ತ ಶಿಸ್ತು ಕ್ರಮ ಜರುಗಿಸತಕ್ಕದ್ದು ಎಂದು ಸರಕಾರದ ಅಧೀನ ಕಾರ್ಯದರ್ಶಿ ವಂದಿತಾ ಶರ್ಮಾರವರು ತಮ್ಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ .

ಸುತ್ತೋಲೆ ನೋಡಿ

Exit mobile version