Site icon ಒಡನಾಡಿ

ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದೆ. ೨೦೨೩ ಜನವರಿ ೧ ರಿಂದ ಡಿಸೆಂಬರ್ ೩೧ ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

೨೦೨೩ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 53 ವಿವಿಧ ಪುಸ್ತಕಗಳಿಗೆ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಅನೇಕ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು ಒಟ್ಟಾರೆ 57ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560 018’ ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ.

ಸ್ಪರ್ಧೆಗೆ ಅನ್ವಯಿಸುವ ನಿಯಮಗಳು:

1) ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು-೫೬೦ ೦೧೮. ದಿನಾಂಕ: ೩ ೧ -೦೫ -೨೦೨೪ರ ಒಳಗೆ ತಲುಪುವಂತೆ ಕಳುಹಿಸಬೇಕು. ತಡವಾಗಿ ಬಂದ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ
2) ಪರಿಶೀಲನೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ
3) ಬಹುಮಾನದ ಬಗ್ಗೆ ಪರಿಷತ್ತು ತಾನು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸನ್ನು ಗಮನಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳುತ್ತದೆ.
4) ಯಾವುದೇ ಪುಸ್ತಕ ಪ್ರಶಸ್ತಿ ಪುರಸ್ಕೃತರು ತಾವು ಪ್ರಶಸ್ತಿ ಪಡೆದ ವಿಭಾಗಕ್ಕೆ ೩ ವರ್ಷ ಅರ್ಜಿ ಸಲ್ಲಿಸುವಂತಿಲ್ಲ
5) ಯಾವುದೇ ಪುಸ್ತಕ ದತ್ತಿ ಪುರಸ್ಕಾರ ಬರಹಗಾರರಿಗೆ ಯಾವುದೇ ಪ್ರಕಾರದಲ್ಲಾಗಲಿ ಮೂರು ಸಲ ಪ್ರಶಸ್ತಿ ಬಂದಿದ್ದೇ ಆದರೆ, ಜೀವಮಾನ ಪೂರ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ದತ್ತಿ ಪುರಸ್ಕಾರಕ್ಕೆ ಅವರು ಅರ್ಜಿ ಸಲ್ಲಿಸುವಂತಿಲ್ಲ
6) ಯಾವುದೇ ಪ್ರಶಸ್ತಿಗೆ ಅರ್ಹ ಗ್ರಂಥಗಳು ಬಾರದಿದ್ದಾಗ ಆ ವರ್ಷ ಪ್ರಶಸ್ತಿಯನ್ನು ನೀಡದಿರುವ ಹಕ್ಕು ಪರಿಷತ್ತಿಗೆ ಇರುತ್ತದೆ.
7) ಒಂದಕ್ಕಿತ ಹೆಚ್ಚು ಗ್ರಂಥಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗೆ ಇರುತ್ತದೆ.
8) ಪಿಎಚ್.ಡಿ. ಗ್ರಂಥಗಳು ಹಾಗೂ ನಿಘಂಟುಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ
9) ಭಾಗವಹಿಸುತ್ತಿರುವ ಸ್ಪರ್ಧೆಯ ದತ್ತಿ ಹೆಸರನ್ನು ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ಸೂಚಿಸತಕ್ಕದ್ದು.
10) ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು.ಈ ಹಿಂದೆ ದತ್ತಿ ಪ್ರಶಸ್ತಿ ಬಂದಿದ್ದರೆ ಅದರ ವಿವರಗಳನ್ನೂ ಸ್ಪಷ್ಟವಾಗಿ ದಾಖಲಿಸ ಬೇಕು.

11) ಪ್ರತಿ ಪುಸ್ತಕ ದತ್ತಿ ಪ್ರಶಸ್ತಿಗಳಿಗೂ ತಲಾ ಮೂರು ಪ್ರತಿಗಳನ್ನು ಕಳುಹಿಸಬೇಕು.
12) ಪುಸ್ತಕ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸುವವರು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಹೊಂದಿರಬೇಕು. ಪುಸ್ತಕ ಕಳುಹಿಸುವಾಗ ತಮ್ಮ ಸದಸ್ಯತ್ವ ಸಂಖ್ಯೆಯನ್ನು ನಮೂದಿಸಿ ಕಳುಹಿಸಬೇಕು. ಒಂದು ವೇಳೆ ಇನ್ನೂ ಸದಸ್ಯರಾಗಿರದಿದ್ದಲ್ಲಿ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಪಡೆದುಕೊಂಡು ವಿವರಗಳೊಂದಿಗೆ ಅರ್ಜಿ ಸಲ್ಲಿಸ ಬಹುದು.
13) ದತ್ತಿಯ ವಿವರಗಳಿಗಾಗಿ ಐದು ರೂಪಾಯಿಯ ಅಂಚೆಚೀಟಿಯನ್ನು ಲಗತ್ತಿಸಿದ ಕವರ್ ಅನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ಕಳುಹಿಸಿ ವಿವರಗಳನ್ನು ಪಡೆಯ ಬಹುದು ಇಲ್ಲದಿದ್ದರೆ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ
ಫೇಸ್ ಬುಕ್ : https://www.facebook.com/kasapaofficial,
https://www.facebook.com/KannadaSahityaParishattu
ಟ್ವಿಟರ್ : https://twitter.com/kannadaparishat
ಕೂ ಆಪ್ : https://www.kooapp.com/profile/kasapa
ಇನ್ ಸ್ಟಾಗ್ರಾಮ್ : https://www.instagram.com/kannadasahityaparishattu
ವೆಬ್ ಸೈಟ್ : https://kannadasahithyaparishattu.in

www.kasapa.in ಅಥವಾ ದೂರವಾಣಿ ಸಂಖ್ಯೆ 080-26612991/26623584 ಇವುಗಳ ಮೂಲಕವೂ ಮಾಹಿತಿಯನ್ನು ಪಡೆಯ ಬಹುದಾಗಿದೆ.

ಉತ್ತರಕನ್ನಡ ಜಿಲ್ಲೆಯ ಬರಹಗಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ಮನವಿ ಮಾಡಿದ್ದಾರೆ.

Exit mobile version