ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಟಷ್ಟಪಡಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಸಿಎಂ, “ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.
Be the first to comment