Site icon ಒಡನಾಡಿ

ಜುಲೈ 20ರಂದು ಚಿತ್ರದುರ್ಗದಲ್ಲಿ ಉದ್ಯೋಗ ಮೇಳ

ವಿಶ್ವ ಕೌಶಲ್ಯ ದಿನದ ಪ್ರಯುಕ್ತ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 20ರಂದು ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ 8ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ. ಎಸ್‌ಎಸ್‌ಎಸ್‌ಸಿ, ಪಿಯುಸಿ, ಡಿಪ್ಲೊಮೊ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಹಾಗೂ 18ರಿಂದ 30 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.


Exit mobile version