ಅಂಕೋಲಾ : ಜುಲೈ 21ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಲ ದಿನಗಳ ಹಿಂದೆ ಅಂಕೋಲಾದ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಈ ವಿಷಯವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಭೂಕುಸಿತದ ಬಗ್ಗೆ ಅಗತ್ಯ ಮಾಹಿತಿಗಳನ್ನು ಪಡೆಯಲಾಗಿದೆ. ಹಾಗೂ ಸಾವನ್ನಪ್ಪಿದ ಸಂತ್ರಸ್ತರಿಗೆ ಪರಿಹಾರವನ್ನು ವಿತರಿಸಲಾಗಿದೆ. ಇನ್ನುಳುದಂತೆ ಘಟನೆಯ ಸಮಗ್ರ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಸ್ತುವಾರು ಸಚಿವ ಮಂಕಾಳು ವೈದ್ಯ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ , ಶಾಸಕರಾದ ಸತೀಶ ಸೈಲ್, ಭೀಮಣ್ಣ ನಾಯಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ ಮಯಂತಾದವರು ಜೊತೆ ಇರಲಿದ್ದಾರೆ.