Site icon ಒಡನಾಡಿ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

xr:d:DAFYE2tp7bc:5,j:45452984216,t:23011904

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭರ್ಜರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ ಹೋಗಿವೆ. ಬಿಟ್ಟು ಬಿಡದೇ ಹಲವು ನದಿ ಜಲಾಶಯಗಳು ಉಕ್ಕಿ ಹರಿಯುತ್ತಿದ್ದು, ರಾಜ್ಯದಲ್ಲಿ ಮಳೆಯ ಅರ್ಭಟ ಜುಲೈ 24ರವರೆಗೂ ಮಳೆಯಾಗಲಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಿಗೆ ನಾಳೆ (ಜುಲೈ 21) ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಿಗೆ ಜುಲೈ 22 ರಿಂದ 24 ರವರೆಗೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಜುಲೈ 21 ಮತ್ತು 22 ರಂದು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 20 ರಿಂದ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಮುಂಗಾರು ಮಳೆ ವ್ಯಾಪಕವಾಗಿದ್ದು, ಇಂದು (ಜುಲೈ 20) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಭಾರಿ ಮಳೆ ಸುರಿಯುತ್ತಿರುವ ಹಾಸನದಲ್ಲಿ ಆರೆಂಜ್ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

 ಈ ಮೂರು ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಅದಾಗಿ ಎರಡು ದಿನ ಸಾಧಾರಣ ಮಳೆ ಬೀಳಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುಂದುವರೆದಿದ್ದು, ಜುಲೈ 24ರವರೆಗೆ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ಬೆಳಗಾವಿಗೆ ಆರೆಂಜ್ ಅಲರ್ಟ್​ ಇದೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.


Exit mobile version