ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಕೇಂದ್ರ ಸಚಿವ ಕುಮಾರಸ್ವಾಮಿ

ಅಂಕೋಲಾ : ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿಯವರು ಶನಿವಾರ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಅವಗಢದಲ್ಲಿ ಮೃತಪಟ್ಟ ಕುಟುಂಬದವರಿಗೆ ಹೆಚ್ಚಿನ ಪರಿಹಾರವನ್ನು ಕೊಡುವಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದರೆ ಸಾಲದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಐಆರ್‌ಬಿ ಯವರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಈ ಅವಗಢ ಸಂಭವಿಸಿದೆ ದೂರಿನ ಬಗ್ಗೆ ಬಗ್ಗೆ ವಿಚಾರಿಸುತ್ತೇವೆ. ಈ ಸಂದರ್ಭದಲ್ಲಿ ಒಬ್ಬರಿಗೂಬ್ಬರು ಆರೋಪ – ಪ್ರತ್ಯಾರೋಪ ಮಾಡಿಕೊಂಡಿರುವುದಕ್ಕಿಂತ ಅಗತ್ಯವಾಗಿರುವ ಕ್ರಮಗಳ ಬಗ್ಗೆ ಹಾಗೂ ಈ ಅವಗಢದಿಂದ ಸಮಸ್ಯೆಗಳೊಗಾಗಿರುವ ಜನರ ಸಂಕಷ್ಟದ ಬಗ್ಗೆ ಸಮಸ್ಯೆ ಸ್ಪಂದಿಸುವ ಕೆಲಸವಾಗಬೇಕು.

ನಾನು ಮುಖ್ಯಮಂತ್ರಿ ಇದ್ದಾಗಲೂ ಕೂಡ ಇಂತಹ ಪ್ರಕೃತಿ ವಿಕೋಪಗಳು ನಡೆದಿದ್ದು, ಆ ಸಂದರ್ಭದಲ್ಲಿ ನಾನು ಕೇಂದ್ರ ಸರ್ಕಾರದ ಸಹಕಾರದ ಬಗ್ಗೆ ಕಾಯದೇನೇ ರಾಜ್ಯದಿಂದಲೇ ಅತಿ ಹೆಚ್ಚು ಪರಿಹಾರವನ್ನು ಸಂತ್ರಸ್ತರಿಗೆ ನೀಡಿದ್ದೆ ಎಂದರು.

ಈ ಗುಡ್ಡ ಕುಸಿತ ಮತ್ತು ಇದರಿಂದಾಗಿರುವ ದುಷ್ಪರಿಣಾಮ, ಜೀವಹಾನಿ ಹಾಗೂ ಆಸ್ತಿಪಾಸ್ತಿಗಳ ಹಾನಿಯ ಬಗ್ಗೆ ನಾನು ಪ್ರಧಾನಮಂತ್ರಿಗಳಿಗೆ ವರದಿಯನ್ನು ಸಲ್ಲಿಸಲಿದ್ದೇನೆ. ಕೇಂದ್ರದಿಂದ ಪರಿಹಾರ ನೀಡುವ ಬಗ್ಗೆ ವಿಚಾರ ಮಾಡಲಾಗುವುದು ಎಂದು ಹೇಳಿ ಸಕಾಲದಲ್ಲಿ ಮಣ್ಣು ತೆರವು ಕಾರ್ಯ ಹಾಗೂ ರಕ್ಷಣಾ ಕಾರ್ಯ ನಡೆಯುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ, ಮಾಜಿ ಸಚಿವ ಆನಂದ ಅಸ್ನೋಟಿಕರ್, ಜೆಡಿಎಸ್ ಮುಖಂಡ ಸೂರಜ್ ಸೋನಿ, ಉಪೇಂದ್ರ ಪೈ ಮುಂತಾದವರು ಉಪಸ್ಥಿತರಿದ್ದರು.

About ಬಿ.ಎನ್‌. ವಾಸರೆ 583 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*