ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕನ್ನಡದಲ್ಲಿ ಬರೆಯಲು ಅವಕಾಶ ಒದಗಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಇಲಾಖೆಯಲ್ಲಿ ಬಡ್ತಿ ನೀಡಲು ನಡೆಸುವ ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆ (ಜಿಡಿಸಿಇ) ಬರೆಯಲು ಇಲ್ಲಿಯವರೆಗೂ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಅವಕಾಶ ನೀಡಲಾಗಿತ್ತು. ಕನ್ನಡದಲ್ಲಿಯೂ ಅವಕಾಶ ಇರಬೇಕು ಎಂದು ಒತ್ತಾಯ ಬಂದಿದ್ದರ ಹಿನ್ನೆಲೆಯಲ್ಲಿ ನಿಗದಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದರು.
ಲೋಕೊ ಪೈಲೆಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆ ಕನ್ನಡದಲ್ಲಿ ಇಲ್ಲದೇ ಇರುವುದನ್ನು ಸಂಸದ ತೇಜಸ್ವಿ ಸೂರ್ಯ ಗಮನಕ್ಕೆ ತಂದಿದ್ದರು. ಕನ್ನಡದಲ್ಲಿಯೂ ಸುತ್ತೋಲೆ ಹೊರಡಿಸಲು ತಿಳಿಸಿದ್ದೇನೆ. ಸೀಮಿತ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆ (ಎಲ್‌ಡಿಸಿಇ) ಸೇರಿದಂತೆ ರೈಲ್ವೆಯ ಎಲ್ಲ ಪರೀಕ್ಷೆಗಳನ್ನು ಕನ್ನಡ ದಲ್ಲಿಯೂ ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಬಹಳ ಅತ್ಯುತ್ತಮವಾದ ಕೆಲಸ ವಾಗಿದೆ ಸ್ವಾಗತ