ದಾಂಡೇಲಿ: ಕೇಂದ್ರ ಸರಕಾರದ ಆಡಳಿತ ವೈಫಲ್ಯ ವಿರೋಧಿಸಿ ಹಾಗೂ ಹಾಗೂ ರಾಜ್ಯದ ವಿರೋಧ ಪಕ್ಷವಾದ ಬಿ.ಜೆ.ಪಿ.ಯ ಸುಳ್ಳು ಆರೋಪಗಳನ್ನು ಖಂಡಿಸಿ ದಾಂಡೇಲಿಯ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಮಾಜಿ ಅಧ್ಯಕ್ಷೆ , ಹಾಲಿ ಸದಸ್ಯೆ ಯಾಸ್ಮಿನ್ ಕಿತ್ತೂರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಜನರು ಕಾಂಗ್ರೆಸ್ ಪಕ್ಷದ ಕಡೆ ಒಲವು ತೋರಿಸುತ್ತಿರುವ ಹಿನ್ನಲೆಯಲ್ಲಿ ಬಿ.ಜೆ.ಪಿ.ಯವರು ಅಸೂಯೆಗೊಂಡು ಸುಳ್ಳು ಆಪಾದನೆಗಳನ್ನು ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಬಂದಂ ಮಾತನಾಡಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ. ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅದನ್ನು ಮುಚ್ಚಿಕೊಳ್ಳಲು ಬಿ.ಜೆ.ಪಿ.ಯವರು ಕಾಂಗ್ರೆಸ್ ಪಕ್ಷದ ಮೇಲೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಪಾದಯಾತ್ರೆಯ ಬಗ್ಗೆ ಜನರೇ ವ್ಯಂಗ್ಯವಾಡುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶಾಹಿದಾ ಪಠಾಣ, ಶಿಲ್ಪಾ ಕೋಡೆ, ರುಹಿನಾ ಖತೀಬ, ಸುಧಾ ಜಾಧವ್, ಸ್ಮಿತಾ ರೊಜಾರಿಯೋ ಮುಂತಾದವರಿದ್ದರು.