ದಾಂಡೇಲಿ ನಗರದ ಪಟೇಲ ವೃತ್ತದ ಬಳಿ ನಿರ್ಮಾಣಗೊಳ್ಳಲಿರುವ ನೂತನ ಕಾಂಗ್ರೆಸ್ ಭವನಕ್ಕೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಹಳ ವರ್ಷಗಳ ಹಿಂದೆಯೇ ಈ ಸ್ಥಳದಲ್ಲಿ ಪಕ್ಷದ ಕಾರ್ಯಾಲಯವಿತ್ತು. ಕೆಲ ದಿನಗಳಿಂದ ನಿರ್ವಹಣೆ ಯಿಲ್ಲದೇ ಪಾಳು ಬಿದ್ದಿತ್ತು. ಇದೀಗ ಇದೇ ಸ್ಥಳದಲ್ಲಿ ನೂತನ ಕಟ್ಟಡ ನಿರ್ಮಿಸಲು ನಿರ್ಧರಿಸಲಾಗಿದೆ. ಇದು ಪಕ್ಷದ ಆಸ್ತಿ. ಪ್ರತಿಯೊಬ್ಬ ಕಾರ್ಯಕರ್ತನಿಗೂ ಇದರ ಮೇಲೆ ಅಧಿಕಾರವಿದೆ. ಹಿಂದೆ ರಾಮಕೃಷ್ಣ ಹೆಗಡೆ ಯವರಿದ್ದಾಗ ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಾಲಯ ನಿರ್ಮಾಣವಾಗಿತ್ತು. ನಂತರ ನಾನು ಆ ಕಾರ್ಯಾಲಯದ ನವೀಕರಣ ಕೆಲಸ ಮಾಡಿಸಿದ್ದೆ.
ಈ ಕಟ್ಟಡ ಗುಣಮಟ್ಟದಿಂದ ನಿರ್ಮಾಣಗೊಳ್ಳಬೇಕು. ಸುಸಜ್ಜಿತ ಕಟ್ಟಡವಾಗಬೇಕು. ಎಲ್ಲ ವ್ಯವಸ್ಥೆ ಗಳಿರಬೇಕು. ಉಳ್ಳವರು ಸಹಕರಿಸಬೇಕು ಎಂದರು.
ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶಾಸಕರಾದ ಆರ್.ವಿ. ದೇಶಪಾಂಡೆಯವರ ನೇತ್ರತ್ವದಲ್ಲಿ ಕಾಂಗ್ರೆಸ್ ಭವನಕ್ಕೆ ಅಡಿಗಲ್ಲು ಹಾಕಲಾಗಿದ್ದು, ಅತಿ ಶೀಘ್ರವಾಗಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನಿಸಿವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಬಂದಂ , ಕಾಂಗ್ರೆಸ್ ಮುಖಂಡರಾದ ಇಕ್ಬಾಲ ಶೇಖ್, ಎಸ್.ಎಸ್. ಪೂಜಾರ, ಯಾಸ್ಮಿನ್ ಕಿತ್ತೂರ ಮುಂತಾದವರಿದ್ದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದ ವಿಡಿಯೋ ನೋಡಿ….
Be the first to comment