
ದಾಂಡೇಲಿ: ಕಾಗದ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ತನ್ನ ಸಿ.ಎಸ್.ಆರ್ ಯೋಜನೆಯಡಿಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಗೆ ಎರಡು ಕಂಪ್ಯೂಟರ್ ಹಾಗೂ ಪ್ರಿಂಟರನ್ನು ಕೊಡುಗೆಯಾಗಿ ನೀಡಿದರು.
ನಗರ ಠಾಣೆಯ ಪಿ.ಎಸ್.ಐ. ಐ.ಅಸರ್. ಗಡ್ಡೇಕರ ಕಂಪ್ಯೂಟರ್ ಹಾಗೂ ಪ್ರಿಂಟರ್ ಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ರಾಘವೇಂದ್ರ ಜೆ.ಆರ್ ಮತ್ತು ರಾಜೇಶ್ ತಿವಾರಿ ಹಾಗೂ ಸಾರ್ವಜನಿಕ ಸಂಪರ್ಕ ವಿಭಾಗದ ರಾಜು ರೋಸಯ್ಯ ಮತ್ತು ಪೊಲೀಸರು ಉಪಸ್ಥಿತರಿದ್ದರು.

Be the first to comment