ದಾಂಡೇಲಿ: ಮೈಕ್ರೋ ಫೈನಾನ್ಸ್ ನವರಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಶಿವಾನಂದ ಮದರಖಂಡಿಯವರು ಶುಕ್ರವಾರ ಎಸ್.ಕೆ.ಎಸ್., ಗ್ರಾಮೀಣ ಕೋಟ್ , ಚೈತನ್ಯ ಮುಂತಾದ ಮೈಕ್ರೋ ಫೈನಾನ್ಸ್ ಅಧಿಕಾರಿಗಳನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲಿಯೂ ಕಾನೂನನ್ನ ಮೀರಿ ಸಾಲವಸೂಲಾತಿಗೆ ಮುಂದಾಗಬಾರದು. ಮಹಿಳೆಯರಿಗೆ ಕಿಲುಕುರಳ ನೀಡಬಾರದು, ಸರ್ಕಾರದ ಆದೇಶವನ್ನು ಪಾಲಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡುವ ಜೊತೆಗೆ ಮೈಕ್ರೋ ಫೈನಾನ್ಸ್ ಅಧಿಕಾರಿಗಳಿಂದ ಮುಚ್ಚಳಿಕೆಯನ್ನು ಕೂಡ ಬರೆಯಿಸಿಕೊಂಡು ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಪಿಎಸ್ಐ ಅಮೀನಸಾಬ ಅತ್ತಾರ ಹಾಗೂ ಕಿರಣ್ ಪಾಟೀಲ್ ಉಪಸ್ಥಿತರಿದ್ದರು.