ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್‌ ನ್ಯೂಸ್‌ ಕೊಟ್ಟಿದೆ. ಇದೀಗ ಸರ್ಕಾರಿ ನೌಕರರಿಗೆ ಗಳಿಕೆ ರಜೆ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶವನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 21.12.2023ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ತಿಳಿದುಕೊಳ್ಳತಕ್ಕದ್ದ ಎಂಬುದಾಗಿ ಹೇಳಿದ್ದಾರೆ.

ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್‌ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್‌ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

About ಬಿ.ಎನ್‌. ವಾಸರೆ 620 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*