
ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ 234 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಗಮನಿಸಬೇಕಾದ ಅಂಶಗಳು ಹಾಗೂ ಆಯ್ಕೆಯಾದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಈಗಾಗಲೇ ಅರ್ಜಿ ಸಲ್ಲಿಕೆ ಜನವರಿ 15, 2025ರಿಂದ ಆರಂಭವಾಗಿದೆ. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್ ಮತ್ತು ಕೆಮಿಕಲ್ ವಿಭಾಗಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಜೂನಿಯರ್ ಎಕ್ಸಿಕ್ಯೂಟಿವ್ (ಇನ್‌ಸ್ಟ್ರುಮೆಂಟೇಶನ್)- 37 ಹುದ್ದೆಗಳು, ಜೂನಿಯರ್ ಎಕ್ಸಿಕ್ಯೂಟಿವ್ (ಕೆಮಿಕಲ್)- 02, ಜೂನಿಯರ್ ಎಕ್ಸಿಕ್ಯೂಟಿವ್ (ಮೆಕ್ಯಾನಿಕಲ್)- 130, ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್)- 65 ಸೇರಿದಂತೆ ಒಟ್ಟು 234 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳುಗೆ ಮಾಸಿಕ ವೇತನ 30,000-1,20,000 ರೂಪಾಯಿವರೆಗೆ ಇರಲಿದೆ. ವಯೋಮಿತಿ ವಿಚಾರಕ್ಕೆ ಬಂದರೆ, 25 ವರ್ಷದೊಳಗಿನವರು ಅರ್ಜಿ ಸಲ್ಲಿಕೆ ಮಾಡಬಹುದು. ಅಭ್ಯರ್ಥಿಗಳು 3 ವರ್ಷ ಡಿಪ್ಲೋಮಾ ಇನ್ ಇನ್‌ಸ್ಟ್ರುಮೆಂಟೇಶನ್ ಇಂಜಿನಿಯರ್, ಕೆಮಿಕಲ್ ಇಂಜಿನಿಯರ್, ಮೆಕನಿಕಲ್ ಇಂಜಿನಿಯರ್, ಎಲೆಕ್ಟ್ರಿಕಲ್ ಇಂಜಿನಿಯರ್ ಪದವಿ ಪೂರ್ಣಗೊಳಿಸಿರಬೇಕು.
ಸಾಮಾನ್ಯ (ಯುಆರ್) 96, ಇಡಬ್ಲುಎಸ್ 23, ಒಬಿಸಿ 63, ಎಸ್ಸಿ 35 ಹಾಗೂ ಎಸ್ಟಿ ವರ್ಗದವರಿಗೆ 17 ಉದ್ಯೋಗಗಳು ಇವೆ. ಅರ್ಜಿ ಶುಲ್ಕದ ವಿಚಾರಕ್ಕೆ ಬಂದ್ರೆ, ಸಾಮಾನ್ಯ (ಯುಆರ್), ಇಡಬ್ಲುಎಸ್, ಒಬಿಸಿ ಅಭ್ಯರ್ಥಿಗಳು ಜಿಎಸ್ಟಿ ಸೇರಿ 1,180 ರೂಪಾಯಿ ಪಾವತಿಸಬೇಕಾಗುತ್ತದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರು, ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ, https://www.hindustanpetroleum.com/
documents/pdf/Recruitment_of_Junior_Executive_Officer_2024-25_English_15012025.ಹಾಗೂ ಅರ್ಜಿ ಸಲ್ಲಿಕೆಗೆ https://www.hindustanpetroleum.com/ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Be the first to comment