Site icon ಒಡನಾಡಿ

ಕರ್ನಾಟಕ ಹೈಕೋರ್ಟನಲ್ಲಿ ಉದ್ಯೋಗಾವಕಾಶ : ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 70 ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳನ್ನು‌ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 15ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

70 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ ಆರ್‌ಪಿಸಿ ವಿಭಾಗಕ್ಕೆ 59 ಹುದ್ದೆಗಳು ಹಾಗೂ ಕೆಕೆಆರ್ (ಓ) ವಿಭಾಗಕ್ಕೆ 11 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಅವಕಾಶವಿದ್ದು, ಮಾಸಿಕ ರೂ. 44,900 ರಿಂದ 1,42,400/ ವರೆಗಿನ ಆಕರ್ಷಕ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ (Law Degree), ವಿಜ್ಞಾನ, ಕಲೆ, ವಾಣಿಜ್ಯ, ಬಿಬಿಎ (BBA), ಕಂಪ್ಯೂಟರ್‌ಅಪ್ಲಿಕೇಶನ್ ಅಥವಾ ಎಂಬಿಎ (MBA) ಪದವಿ ಪೂರ್ಣ ಗೊಳಿಸಿರಬೇಕು.‌ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳಾಗಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ
(2A/2B/3A/3B) ಅಭ್ಯರ್ಥಿಗಳಿಗೆ 3 ವರ್ಷಗಳ
ವಯೋಮಿತಿ ಸಡಿಲಿಕೆ ಇರಲಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ
ಮತ್ತು ಮುಖ್ಯ ಪರೀಕ್ಷೆಗಳಿಗೆ ಪ್ರತ್ಯೇಕ ಶುಲ್ಕ
ನಿಗದಿಪಡಿಸಲಾಗಿದೆ:

ಪೂರ್ವಭಾವಿ ಪರೀಕ್ಷೆ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 500), ಹಾಗೂ ಎಸ್‌ಸಿ/ಎಸ್ ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ.

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ, ಸ್ಟೆನೋಗ್ರಫಿ ಪರೀಕ್ಷೆ ಹಾಗೂ ಅಂತಿಮವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಹೈಕೋರ್ಟ್‌ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಐಡಿ ಪ್ರೂಫ್, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಭಾವಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ಫಾರ್ಮ್ ಭರ್ತಿ ಮಾಡಬೇಕು.

Exit mobile version