Site icon ಒಡನಾಡಿ

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ ಪೊಲೀಸರು ಗಣಿತ ಶಿಕ್ಷಕ ಎಚ್‌.ಒ.ರಾಜಣ್ಣ ವಿರುದ್ಧ ಪೋಕ್ಸೊ ಪ್ರಕರಣ ದಾಖಲು‌ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ನಾಯಕನ ಹಟ್ಡಿಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ ಚಳ್ಳಕೆರೆ ತಾಲ್ಲೂಕು ತಳಕು ಠಾಣೆ ಪೊಲೀಸರು ಗಣಿತ ಶಿಕ್ಷಕ ಎಚ್‌.ಒ.ರಾಜಣ್ಣ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಚಳ್ಳಕೆರೆ ತಾಲ್ಲೂಕಿನ ಬಂಗಾರದೇವರಹಟ್ಟಿ ಸರ್ಕಾರಿ ಶಾಲೆಯ ಗಣಿತ ಶಿಕ್ಷಕ ಎಚ್.ಒ. ರಾಜಣ್ಣ ಪರಾರಿಯಾಗಿದ್ದಾನೆ.

ಈ ಘಟನೆಗೆ ಸಂಬಂಧಿಸಿ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಕಾರಣ ಚಳ್ಳಕೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ, ಅಲ್ಲಿಂದಲೇ ಪರಾರಿಯಾಗಿದ್ದಾನೆ.

ವಿದ್ಯಾರ್ಥಿನಿಯೊಂದಿಗೆ ಸಲುಗೆ ಹೊಂದಿದ್ದ ರಾಜಣ್ಣ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದ. ವಿದ್ಯಾರ್ಥಿನಿ ಗರ್ಭಿಣಿಯಾದ ನಂತರ ಚಳ್ಳಕೆರೆ ನಗರದ ಶ್ರೀಲಕ್ಷ್ಮಿ ಶ್ರೀನಿವಾಸ ನರ್ಸಿಂಗ್ ಹೋಂನ ವೈದ್ಯೆ ಶಂಕರಲಕ್ಷ್ಮಿ ಅವರನ್ನು ಸಂಪರ್ಕಿಸಿ ಗರ್ಭಪಾತ ಮಾಡಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಗರ್ಭಪಾತ ಮಾಡಿದ ವೈದ್ಯರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಆರೋಪಿಯು ಸಂತ್ರಸ್ತೆಯನ್ನು ತಳಕು ಮತ್ತು ಚಳ್ಳಕೆರೆ ನಗರದ ಇತರ ಸ್ಥಳಗಳಿಗೆ ಕರೆದೊಯ್ದು ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧವನ್ನು ಯಾರಿಗೂ ಬಹಿರಂಗಪಡಿಸದಂತೆ ಆಕೆಗೆ ಎಚ್ಚರಿಕೆ ನೀಡಿದ್ದ ಎಂದು ತಿಳಿದು ಬಂದಿದೆ.
ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ದೂರು ದಾಖಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಚಳ್ಳಕೆರೆಯ ಬಿಇಒ ಮೂಲಕ ತನಿಖೆ ಆರಂಭಿಸಿದ್ದು, ರಾಜಣ್ಣ ಅವರನ್ನು ಅಮಾನತುಗೊಳಿಸಲಾಗಿದೆ ಎಂಬ‌ ಮಾಹಿತಿ ಲಭ್ಯವಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಎನ್. ರೇಖಾ ಮತ್ತು ಅವರ ತಂಡ ಬಂಗಾರದೇವರಹಟ್ಟಿಗೆ ತೆರಳಿ ಬಾಲಕಿಯ ಪೋಷಕರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿ, ಗರ್ಭಪಾತ ಮಾಡಿದ ನಗರದ ಸೋಮಗುಡು ರಸ್ತೆಯಲ್ಲಿರುವ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ರಾಜಣ್ಣ ಮತ್ತು ಡಾ. ಶಂಕರ ಲಕ್ಷ್ಮಿ ವಿರುದ್ಧ ತಳಕು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿವೈಎಸ್ಪಿ ಚಳ್ಳಕೆರೆ ಅವರು ಪೋಕ್ಸೋ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬ್ಲಾಕ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿರುವುದಾಗಿ ವರದಿಯಾಗಿದೆ. 

Exit mobile version