ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಸರಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿಯಮಾವಳಿಗಳನ್ನು ರೂಪಿಸಿದೆ.
ಆಸಕ್ತ ಮತ್ತು ಅರ್ಹ ನೌಕರರು ವರ್ಗಾವಣೆಗಾಗಿ ಎ.13 ರಿಂದ ಮೇ 31ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ನೌಕರರು ತಮ್ಮ ಸೇವಾ ದಾಖಲೆಗಳನ್ನು ನಿಖರವಾಗಿ ಒದಗಿಸುವುದು ಕಡ್ಡಾಯವಾಗಿದೆ. ಕೇವಲ ವೈಯಕ್ತಿಕ ಬೇಡಿಕೆಗಳಲ್ಲದೆ, ಇಲಾಖೆಯ ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಿ ವರ್ಗಾವಣೆ ಆದೇಶ ಹೊರಡಿಸಲಾಗುತ್ತದೆ.
ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯ ನೆಲೆಯ ಮೇಲೆ ಆದ್ಯತೆ ನೀಡಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ನೌಕರರಿಗೆ, ಗರ್ಭಿಣಿ ಮಹಿಳಾ ನೌಕರರಿಗೆ ಆದ್ಯತೆ ನೀಡಲಾಗಿದೆ. ಕುಟುಂಬದ ಅನಿವಾರ್ಯ ಪರಿಸ್ಥಿತಿ ಅಥವಾ ಮಕ್ಕಳ ಶಿಕ್ಷಣದಂತಹ ಕಾರಣಗಳಿಗೆ ನಿಯಮಾನುಸಾರ ವಿನಾಯಿತಿ ನೀಡಲಾಗಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Be the first to comment