ಎಪ್ರಿಲ್ 19 ರಂದು ಇಂಟರ್ ಡಿಸ್ಟ್ರಿಕ್ಟ್ ರಾಪಿಡ್ ಚೆಸ್ ಟೂರ್ನಮೆಂಟ್

ದಾಂಡೇಲಿಯ ರೋಟರಿ ಕ್ಲಬ್ ಆಶ್ರಯದಲ್ಲಿ ಇಂಟರ್ ಡಿಸ್ಟ್ರಿಕ್ಟ್ ರಾಪಿಡ್ ಚೆಸ್ ಟೂರ್ನಮೆಂಟ್ ನ್ನು ಎಪ್ರಿಲ್ 19ನೇ ಏಪ್ರಿಲ್ ರಂದು ರೋಟರಿ ಶಾಲೆಯಲ್ಲಿ ಆಯೋಜಿಸಲಾಗುತ್ತಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ್ಯ ಆಶುತೋಷಕುಮಾರ ರಾಯ್ ತಿಳಿಸಿದ್ದಾರೆ.

ರೋಟರಿ ಪ್ರಮುಖರಾದ ನವಿನ ಕಾಮತ ಮಾತನಾಡಿ ಈ ಟೂರ್ನಮೆಂಟ್ ಕ್ರೀಡಾಸ್ಫೂರ್ತಿ, ತಂತ್ರಚಿಂತನೆಗಳನ್ನು ಉತ್ತೇಜಿಸುವುದರೊಂದಿಗೆ ಕಾರವಾರ ಜಿಲ್ಲೆಯ ಪ್ರತಿಭಾವಂತ ಚೆಸ್ ಆಟಗಾರರಿಗೆ ಸ್ಪರ್ಧಾತ್ಮಕ ವೇದಿಕೆಯನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಟಗಾರರು ಭಾಗವಹಿಸುವ ನಿರೀಕ್ಷೆಯಿದ್ದು, ಸಮುದಾಯದ ಸಕ್ರಿಯ ಸಹಭಾಗಿತ್ವವೂ ನಿರೀಕ್ಷಿಸಲಾಗಿದೆ ಎಂದರು.

ಈ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ದಾಳುಗಳು ಏಪ್ರಿಲ್ 17ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಏ.19ರಂದು ಬೆಳಿಗ್ಗೆ 9 ಗಂಟೆಯಿಂದ ಪಂದ್ಯಾವಳಿ ಆರಂಭವಾಗಲಿದೆ. 8 ವರ್ಷದೊಳಗಿನ, 10 ವರ್ಷದೊಳಗಿನ, 12 ವರ್ಷದೊಳಗಿನ, 14 ವರ್ಷದೊಳಗಿನ ಬಾಲಕರು ಮತ್ತು ಬಾಲಕಿಯರಿಗೆ ಹಾಗೂ 16 ವರ್ಷದೊಳಗಿನ ಬಾಲಕ/ ಬಾಲಕಿಯರಿಗೆ ಮಿಕ್ಸೆಡ್ ಹೀಗೆ ಒಟ್ಟು ಐದು ವಿಭಾಗಗಳಲ್ಲಿ ಈ ಪಂದ್ಯಾವಳಿ ನಡೆಯಲಿದೆ. ಇದರ ಹೊರತಾಗಿಯೂ ಮುಕ್ತ ಚೆಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಭಾಗವಹಿಸುವ ಸ್ಪರ್ಧಿಗಳು ರೂ. 300 ಪ್ರವೇಶ ಶುಲ್ಕವನ್ನು ಪಾವತಿಸಬೇಕು. ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸಬೇಕೆಂದು ವಿನಂತಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ ಹಾಗೂ ಪ್ರವೇಶಕ್ಕಾಗಿ 8762480128 / 9481360128 / 9591618850 ಮೊಬೈಲ್ ಸಂಖ್ಯೆಗೆ ಸಂಪರ್ಕಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ‌ ಮಿಥುನ ನಾಯಕ, ರೋಟರಿ ಕ್ಲಬ್ ಪ್ರಮುಖರಾದ ಅಭಿಷೇಕ ಕನ್ಯಾಡಿ ಮುಂತಾದವರು ಉಪಸ್ಥಿತರಿದ್ದರು.

About ಬಿ.ಎನ್‌. ವಾಸರೆ 675 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*