Site icon ಒಡನಾಡಿ

ಕರ್ಕಾ ಕ್ರಾಸ್ ಅಜಗಾಂವ ಹತ್ತಿರ ಭೀಕರ ರಸ್ತೆ ಅಪಘಾತ : ಧಾರವಾಡ, ಹಳಿಯಾಳದ ಈರ್ವರ ಧುರ್ಮರಣ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್ ಅಜಗಾಂವ ಸಮೀಪ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಈರ್ವರು ಮೃತಪಟ್ಟ ಘಟನೆ ನಡೆದಿದೆ.

ದಾಂಡೇಲಿಯಿಂದ ಹಳಿಯಾಳ ಕಡೆಗೆ ತೆರಳುತ್ತಿದ್ದ ಸುಜಕಿ ಎಸ್ ಕಾರು ಚಾಲಕನ ನಿಯಂತ್ರಣ ತಪ್ಪಿದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಎರೆಉ ಮರದ ನಡುವೆ ಸಿಲುಕಿ, ಪ್ರಯಾಣಿಸುತ್ತಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಓರ್ವ ಧಾರವಾಡದ ಫಾರೂಖ್ ಸಾಬ್ ಹಾಗೂ ಇನ್ನೋರ್ವ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಹಳಿಯಾಳದ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಚಸಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸ್ಐ ಶಿವಾನಂದ ನಾವಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Exit mobile version