ಸಹ್ಯಾದ್ರಿ ಲಲಿತಕಲಾ ಕೇಂದ್ರದಲ್ಲಿ ಗುರುವಂದನ: ಸನ್ಮಾನ
ದಾಂಡೇಲಿಯ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಸಹ್ಯಾದ್ರಿ ಲಲಿತಕಲಾ ಕೇಂದ್ರದಲ್ಲಿ ಗುರುಪೂರ್ಣಿಮೆ ಅಂಗವಾಗಿ ಲಲಿತ ಕಲೆಗಳ ಗುರುಗಳನ್ನು ಸನ್ಮಾನಿಸಿ ಗೌರವಿಸುವ ಹಾಗೂ ವಿದ್ಯಾರ್ಥಿಗಳಿಂದ ಗುರುವಂದನೆ ಸಲ್ಲಿಸುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜನತಾ ವಿದ್ಯಾಲಯದ ಪ್ರಾಚಾರ್ಯ ಅಮೃತ್ ರಾಮರಥ ಅವರು, ಪ್ರತಿಯೊಬ್ಬರ ಜೀವನದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. […]