ಸದ್ಯಕ್ಕೆ ಶಾಲೆ ಆರಂಭವಿಲ್ಲವೆಂದ ಶಿಕ್ಷಣ ಸಚಿವ ಸುರೇಶ ಕಮಾರ್

ಬೆಂಗಳೂರು: ಸದ್ಯಕ್ಕೆ ಶಾಲೆ ಆರಂಭಿಸುವ ಆಲೋಚನೆಯಿಲ್ಲ. ಪಾಲಕರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.‌ ಸುರೇಶ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶಾಲೆಗಳನ್ನು ಆರಂಭಿಸುವ ಬಗ್ಗೆ ಕೇಂದ್ಪೋರ ಸರಕಾರ ಪಾಲಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ಈತು. ಅದರ ಭಾಗವಾಗಿ ನಾವು ರಾಜ್ಯದಲ್ಲಿರುವ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದು ಅವರು ಸಾಮಾಜಿಕ ಜಾಲ ತಾಣದಲ್ಲಿ ತಿಳಿಸಿದ್ದಾರೆ.

ಇದೇ ಜೂನ್ 10, 11, 12 ರಂದು ಎಲ್ಲ ಶಾಲೆಗಳಲ್ಲಿ ಪೋಷಕರ ಸಭೆ ನಡೆಯಲಿದೆ. ಪೋಷಕರ ಅಭಿಪ್ರಾಯಗಳು ಕ್ರೋಢಿಕರಣವಾಗಿ ಜೂನ್ 15ಕ್ಕೆ ಸರ್ಕಾರವನ್ನು ತಲುಪಬಹುದು. ನಂತರ ಶಾಲೆ ಆರಂಭಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ನಿರ್ಧರಿಸಲಾಗುವುದು. ಜುಲೈ 1 ರಿಂದ ಶಾಲೆಯನ್ನು ತೆರೆಯುವುದಿಲ್ಲ. ಅಭಿಪ್ರಾಯ ಸಂಗ್ರಹವಷ್ಟೇ ಎಂದು ಸ್ಪಷ್ಟ ಪಡಿಸಿದರು.

ಈ ಸಂದರ್ಭದಲ್ಲಿ ಎರಡು ಅಭಿಪ್ರಾಯಗಳು ವ್ಯಕ್ತವಾಗಿದೆ. ಕೊರೊನಾ ದೀರ್ಘ ಕಾಲ ಇದ್ದರೆ ಅಲ್ಲಿಯವರೆಗೆ ಶಾಲೆಯನ್ನು ಮುಂದೂಡಬೇಕೇ ಅಥವಾ ಕೊರೊನಾದ ಜೊತೆಗೆ ನಾವು ಬದುಕಬೇಕೇ ಎಂಬ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಚಿಕನ್ ಗುನ್ಯಾ ರೀತಿಯ ಕಾಯಿಲೆ ಜೊತೆ ಬದುಕುತ್ತಿದ್ದೇವೆ. ಹೀಗೆಯೇ ಕೊರೊನಾ ಜೊತೆ ಬದುಕಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಯೂ ಎದ್ದಿದೆ. ಇದರ ಜೊತೆಯಲ್ಲಿ ಶಾಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದು ಹೇಗೆ ಎಂಬ ಬಗ್ಗೆ ನಾವು ಚರ್ಚಿಸಬೇಕಿದೆ ಎಂದು ಸುರೇಶ ಕುಮಾರ ತಿಳಿಸಿದ್ದಾರೆ.

About ಬಿ.ಎನ್‌. ವಾಸರೆ 580 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*