ಇಡಗುಂದಿ ಡಬ್ಗುಳಿಯಲ್ಲಿ ಗುಡ್ಡ ಕುಸಿತ: ತಾ.ಪಂ. ಅಧ್ಯಕ್ಷರ ಬೇಟಿ

ಯಲ್ಲಾಪುರ: ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಇಂಡಗುಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಬ್ಗುಳಿಯಲ್ಲಿ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತ ಉಂಟಾಗಿದೆ.

ಸ್ಥಳಕ್ಕೆ ತಾಲೂಕಾಪಂಚಾಯತ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಭಟ್ ಹಾಗೂ ಜಿಲ್ಲಾ ಪಂಚಾಯತ ಸದಸ್ಯೆ ಶ್ರೀಮತಿ ಶ್ರುತಿ ಹೆಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೆ ಸಂಬಂಧಿಸಿದ ಅಧಿಕಾರಿಗೆ ಕರೆ ಮಾಡಿ ರಸ್ತೆ ತೆರವು ಮಾಡುವಂತೆ ತಿಳಿಸಿ ತಕ್ಷಣ ಜೆಸಿಬಿ ಮೂಲಕವಾಗಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಗುಡ್ಡ ಕುಸಿದ ದೃಷ್ಯ

ಈ ವೇಳೆ ಇಂಡಗುಂದಿ ಗ್ರಾಮಪಂಚಾಯತ ಅಧ್ಯಕ್ಷರಾದ ವಿ.ಎನ್.ಭಟ್ ಹಾಗೂ ಪ್ರಮುಖರು ಹಾಜರಿದ್ದರು.

About ಬಿ.ಎನ್‌. ವಾಸರೆ 704 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*