ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನಾಳೆ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ?

ಅಂಕೋಲಾ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ, ಶಾಸಕ ಬಿ . ವೈ.ವಿಜಯೇಂದ್ರ ಅವರು ಜುಲೈ 21ರಂದು ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಈ ಬಗ್ಗೆ ಭಾಜಪ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದ್ದು , ಶಿರೂರು ಗುಡ್ಡ ಕುಸಿತ ಸ್ಥಳದ ವೀಕ್ಷಣೆಯನ್ನು ಮಾಡಿ ನಂತರ ಆ ಘಟನೆಯಲ್ಲಿ ಸಾವನಪ್ಪಿದ ಸಂತ್ರಸ್ತರ ಮನೆಗಳಿಗೂ ಕೂಡ ಬಿ. ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭದಲ್ಲಿ ಶಾಸಕರಾದ ದಿನಕರ ಶೆಟ್ಟಿ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಸುನೀಲ ಹೆಗಡೆ , ಸುನೀಲ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.

About ಬಿ.ಎನ್‌. ವಾಸರೆ 583 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*