ದಾಂಡೇಲಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಮತ್ತು ಸಂಶೋಧನಾ ಪರಿಷತ್ತು ಬೆಂಗಳೂರು ಮೇ 1, ಕಾರ್ಮಿಕ ದಿನಾಚರಣೆಯ ಪ್ರಯುಕ್ತ ರಾಜ್ಯದ ವಿಶೇಷ ಸೇವಾ ಸಾಧಕರನ್ನು ಗುರುತಿಸಿ ಕೊಡಮಾಡುವ ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ದಾಂಡೇಲಿ ಜನತಾ ವಿದ್ಯಾಲಯದ ಉಪನ್ಯಾಸಕಿ ನಿರುಪಮಾ ನಾಯಕ ಭಾಜನರಾಗಿದ್ದಾರೆ.
ನಿರುಪಮಾ ನಾಯಕ ಅವರು ಶಿಕ್ಷಣ ಶಾಸ್ತ್ರ ವಿಷಯದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾಗಿದ್ದು ಇವರಲ್ಲಿಯ ಶಿಸ್ತು, ಪ್ರಾಮಾಣಿಕತೆ ಬದ್ಧತೆ, ಕ್ರಿಯಾಶೀಲತೆ ನಿಸ್ವಾರ್ಥ ಸೇವೆ ಇಂದಿನ ಸಮುದಾಯಕ್ಕೆ ಮಾದರಿಯಾಗಿದೆ. ಶೈಕ್ಷಣಿಕವಾಗಿ ಸಾಮಾಜಿಕವಾಗಿ ಹಲವು ಆಯಾಮಗಳಲ್ಲಿ ಇವರ ಸೇವೆ ಅತ್ಯಮೂಲ್ಯವಾಗಿದೆ ಎಂದು ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ತಿಳಿಸಿದ್ದಾರೆ.
ಮೇ 1ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಪ್ರಶಸ್ತಿಪ್ರಧಾನ ಮಾಡಲಿದ್ದು , ಇಸ್ರೋ ಮಾಜಿ ಅಧ್ಯಕ್ಷ ಶ್ರೀ ಡಾ. ಕಿರಣ್ ಕುಮಾರ್ ಎ.ಎಸ್, ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಶಾಸಕರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷರಾದ ಹುಲಿಕಲ್ ನಟರಾಜ್ ತಿಳಿಸಿದ್ದಾರೆ.
Be the first to comment