ಕನ್ನಡ ಸಾಹಿತ್ಯ ಪರಿಷತ್ತಿನ ೨೦೨೫ನೆಯ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪುಸ್ತಕಗಳಿಗೆ ನೀಡಲಾಗುವ ವಿವಿಧ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಿಗಾಗಿ ಪುಸ್ತಕಗಳ ಆಹ್ವಾನ ಮಾಡಲಾಗಿದ್ದು, 2025 ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಗಳಾದ ಕೆ.ಎ. ದಯಾನಂದ, (ಭಾ.ಆ.ಸೇ.) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

೨೦೨೫ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು ೫೫ ದತ್ತಿ ಪುಸ್ತಕಗಳಿಗೆ ವಿವಿಧ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಬೇರೆ ಬೇರೆ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಇದಕ್ಕಾಗಿ ೫೯ ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಆಡಳಿತಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತು,
ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು -೫೬೦೦೧೮’ ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ. ಹೆಚ್ಚಿನ ಮಾಹಿತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ ವೆಬ್ ಸೈಟ್ : https://kannadasahithyaparishattu.in
www.kasapa.in ಅಥವಾ ದೂರವಾಣಿ ಸಂಖ್ಯೆ – ೦೮೦-೨೬೬೧೨೯೯೧/೨೬೬೨೩೫೮೪ ಮೂಲಕವೂ ಮಾಹಿತಿಯನ್ನು
ಪಡೆಯಬಹುದಾಗಿದೆ.

ಯಾವ್ಯಾವ ದತ್ತಿ ಪ್ರಶಸ್ತಿಗಳು…?
೦೧) ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ ದತ್ತಿ – ೨೦೨೫ರಲ್ಲಿ ಪ್ರಕಟವಾದ ವಿಜ್ಞಾನ ತಂತ್ರಜ್ಞಾನ ಪ್ರಕಾರಗಳಾದ ವೈದ್ಯಕೀಯ ಶಾಸ್ತ್ರ/ಯಂತ್ರಶಾಸ್ತ್ರ/ವಿದ್ಯುನ್ಮಾನ ಶಾಸ್ತ್ರದಲ್ಲಿ ಕನ್ನಡದಲ್ಲಿ ರಚಿತವಾದ ಆ ವರ್ಷದ ಶ್ರೇಷ್ಠ ಕೃತಿಗಳಿಗೆ ರೂ.೧೦,೦೦೦=೦೦ಗಳ ನಗದು ಬಹುಮಾನ ನೀಡಲಾಗುವುದು.
೦೨) ಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ – ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟವಾದ ಡಾ. ಶ್ರೀ ಜಚನಿ ಸಾಹಿತ್ಯ ಸಮೀಕ್ಷೆ (ವೀರಶೈವ ಸಾಹಿತ್ಯ) ಹಾಗೂ ಸಾಹಿತ್ಯ ಕುರಿತು ಬರೆದ ಕೃತಿಗಳಿಗೆ ರೂ. ೧೦,೦೦೦/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ
ಗೌರವಿಸಲಾಗುವುದು.
೦೩) ಶ್ರೀಮತಿ ಭಾರತಿ ಮೋಹನ ಕೋಟಿ ದತ್ತಿ ‘ಅನುವಾದ ಸಾಹಿತ್ಯಕ್ಕಾಗಿ’ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಅನುವಾದ ಸಾಹಿತ್ಯ ಕೃತಿಗೆ ರೂ. ೧೦,೦೦೦/- ನಗದು
ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೦೪) ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲಶೆಟ್ಟಿ ಡಾ. ಮದನಕೇಸರಿ ಜೈನ ದತ್ತಿ : ೨೦೨೫ನೆಯ ಇಸವಿಯಲ್ಲಿ ಪ್ರಕಟವಾದ ಯಾವುದೇ ಜೈನ ಸಾಹಿತ್ಯ ಧರ್ಮಕ್ಕೆ ಸಂಬಂಧಪಟ್ಟ ಕೃತಿಗೆ ರೂ. ೭,೫೦೦/- ನಗದು ಬಹುಮಾನ ನೀಡಿ ಗೌರವಿಸಲಾಗುವುದು.
೦೫) ಪೂಜ್ಯ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ:-
೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಜೈನಧರ್ಮದ ಇತಿಹಾಸ, ಸಾಹಿತ್ಯ ಸಂಸ್ಕೃತಿ ಹಾಗೂ ಕಲೆ,‌ಸಂಶೋಧನಾ ಗ್ರಂಥ, ಗ್ರಂಥ ಸಂಪಾದನೆ, ಪ್ರಾಚೀನ, ಗ್ರಂಥಗಳು ಹಾಗೂ ಅನುವಾದಕ್ಕೆ ಸಂಬಂಧಿಸಿದ ಕೃತಿಗೆ ೬,೦೦೦ ರು.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೬) ವಸುದೇವ ಭೂಪಾಲಂ ದತ್ತಿ: ೨೦೨೫ರಲ್ಲಿ ಪ್ರಕಟವಾದ ಅತ್ಯುತ್ತಮ ಕಾದಂಬರಿ ಕೃತಿಗೆ ರೂ.೫೦೦೦ ಬಹುಮಾನ ನೀಡಲಾಗುವುದು.
೨೦೨೫ರಲ್ಲಿ ಪ್ರಕಟವಾದ ಸಣ್ಣಕಥಾ ಸಂಕಲನಗಳನ್ನು ಸ್ಪರ್ಧೆಗೆ ಕಳುಹಿಸಬಹುದು ರೂ. ೩೦೦೦ ನಗದು ಬಹುಮಾನ ನೀಡಿ ಗೌರವಿಸಲಾಗುವುದು. ೨೦೨೫ರಲ್ಲಿ ಪ್ರಕಟವಾದ ಮಕ್ಕಳ ಸಾಹಿತ್ಯ ಕೃತಿಗೆ ರೂ.೨೦೦೦ ಬಹುಮಾನ ನೀಡಲಾಗುವುದು. ೨೦೨೫ರಲ್ಲಿ ಪ್ರಕಟವಾದ ವೈಚಾರಿಕ ಲೇಖನಗಳ ಕೃತಿಗೆ ರೂ. ೨೦೦೦ ಬಹುಮಾನ ನೀಡಲಾಗುವುದು.
೦೭) ದಿ. ಡಿ. ಮಾಣಿಕರಾವ ಸ್ಮರಣಾರ್ಥ ಹಾಸ್ಯ ಸಾಹಿತ್ಯ ದತ್ತಿ :- ೨೦೨೫ ಜನವರಿ – ಡಿಸೆಂಬರ್‌ವರೆಗೆ ಪ್ರಕಟವಾದ ಯಾವುದೇ ಪ್ರಕಾರದ ಹಾಸ್ಯ ಸಾಹಿತ್ಯ ಕೃತಿಗೆ ರೂ. ೫೦೦೦
ನಗದು ಬಹುಮಾನ ನೀಡಿ ಗೌರವಿಸಲಾಗುವುದು.
೦೮) ದಿ. ಡಾ. ಎ.ಎಸ್. ಧರಣೇಂದ್ರಯ್ಯ-ಮನೋವಿಜ್ಞಾನ ದತ್ತಿ : ೨೦೨೫ ಜನವರಿ,‌ ಡಿಸೆಂಬರವರೆಗೂ ಪ್ರಕಟವಾದ ಕನ್ನಡ ಕಾದಂಬರಿಗೆ ರು. ೫೦೦೦ ಬಹುಮಾನ ನೀಡಿ ಗೌರವಿಸಲಾಗುವುದು.
೯) ಭಾರತೀಸುತ ಸ್ಮಾರಕ ದತ್ತಿ ಪ್ರಶಸ್ತಿ: ಪ್ರಕಟವಾದ ಮನೋವಿಜ್ಞಾನ ಸಾಹಿತ್ಯ ಕೃತಿಗೆ ರೂ.೫೦೦೦ ನಗದು ೨೦೨೪ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಕನ್ನಡ ‘ಕಾದಂಬರಿ’ ಕೃತಿಗೆ ರೂ. ೫,೦೦೦/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೧೦) ಶ್ರೀಮತಿ ಲಕ್ಷ್ಮೀದೇವಿ ಶಾಂತರಸ ಹೆಂಬೇರಾಳು ದತ್ತಿ ಪ್ರಶಸ್ತಿ:- ಕನ್ನಡ ಮಹಿಳಾ ಬರಹಗಾರರ ವಿವಿಧ ಪ್ರಕಾರಗಳಾದ ಕಥೆ, ಸಂಕೀರ್ಣ, ಪ್ರಬಂಧ, ಅನುವಾದ, ಕಾದಂಬರಿ ಮತ್ತು ಕಾವ್ಯ ಪ್ರಕಾರಕ್ಕೆ ಅನುಕ್ರಮವಾಗಿ ೨೦೧೯ ರಿಂದ ೨೦೨೫ರ ವರೆಗೆ ಆರು ವರ್ಷಗಳ ಅವಧಿಗೆ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಥಮ ಮುದ್ರಣವಾಗಿ ಪ್ರಕಟವಾದ “ಪ್ರಬಂಧ” (ಪ್ರಸ್ತುತ ಸಾಲಿಗೆ) ಕೃತಿಯೊಂದಕ್ಕೆ ರೂ. ೫,೦೦೦/ -ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

೧೧) ಪ್ರಕಾಶಕ ಆರ್. ಎನ್. ಹಬ್ಬು ದತ್ತಿ ಪ್ರಶಸ್ತಿ:- ೨೦೨೫ ಜನವರಿ – ಡಿಸೆಂಬ‌ವರೆಗೆ ಪ್ರಕಟವಾದ ‘ಕಥಾ ಸಂಕಲನ’ ಪ್ರಕಾರದ ಪುಸ್ತಕ ಪ್ರಕಟಣೆ ಮಾಡಿದ ‘ಪ್ರಕಾಶನ ಸಂಸ್ಥೆಗೆ’ ರೂ. ೫,೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಕನ್ನಡ ಪುಸ್ತಕ
ಪ್ರಕಾಶನ ಸಂಸ್ಥೆಗಳು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
೧೨) ಅಮೃತ ಮುಹೋತ್ಸದ ಸಾಹಿತ್ಯ ಸಮ್ಮೇಳನದ ಸವಿ ನೆನಪಿನ ದತ್ತಿ (ಎಲ್‌. ಬಸವರಾಜು ದತ್ತಿ ೨೦೨೫ ಜನವರಿ – ಡಿಸೆಂಬರ್ ವರೆಗೆ ಸಾಲಿನ ಯಾವುದೇ ಪ್ರಕಾರದ ಉತ್ತಮ ದಲಿತ ಸಾಹಿತ್ಯ ಕೃತಿಗೆ ರೂ. ೫,೦೦೦ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೧೩) ನಿಡಸಾಲೆ ಪುಟ್ಟಸ್ವಾಮಯ್ಯ ಸಾಹಿತ್ಯ ಪ್ರಶಸ್ತಿ ದ
೨೦೨೫ ಜನವರಿ – ಡಿಸೆಂಬರ್‌ವರೆಗೆ ಕನ್ನಡದಲ್ಲಿ ಪ್ರಕಟಣೆಗೊಂಡ ಸಿನಿಮಾ ಕ್ಷೇತ್ರದ ಸಾಹಿತ್ಯ ಕೃತಿಗೆ ರೂ, ೫,೦೦೦ ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೧೪) ಗುದ್ದಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿ : ೨೦೨೫ ಜನವರಿ – ಡಿಸೆಂಬರ್ ವರೆಗೆ ಪ್ರಕಟವಾದ ಶೇಷ್ಠ ಕಾದಂಬರಿಗೆ ರೂ. ೫,೦೦೦ ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೧೫) ಶ್ರೀಮತಿ ಗೌರು ಭಟ್ ದತ್ತಿ ಪ್ರಶಸ್ತಿ –
೨೦೨೫ ಜನವರಿ – ಡಿಸೆಂಬ‌ವರೆಗೆ ಪ್ರಕಟವಾದ ಮಹಿಳೆಯರಿಗೆ ಸಂಬಂಧಿಸಿದ ಮಹಿಳೆಯರ ಲೇಖನ ಸಂಕಲನಕ್ಕೆ ಪ್ರಬಂಧ ಸಂಕಲನಕ್ಕೆ ರೂ.೫,೦೦೦ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೧೬) ಶ್ರೀಮತಿ ಗಂಗಮ್ಮ ಶ್ರೀ ಟಿ. ಶಿವಣ್ಣ ದತ್ತಿ:-
೨೦೨೪ ಜನವರಿಯಿಂದ ಡಿಸೆಂಬರ್ ರವರೆಗೂ ಪ್ರಕಟವಾದ ಜಾತ್ಯಾತೀತ ವಿಚಾರವನ್ನೊಳಗೊಂಡ ಕೃತಿಗೆ ರೂ. ೫,೦೦೦- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೧೭) ಡಾ. ಹಾ.ಮಾ. ನಾಯಕ ಸ್ಮಾರಕ ದತ್ತಿ ಪ್ರಶಸ್ತಿ – ೨೦೨೫ ಜನವರಿ – ಡಿಸೆಂಬರ್‌ವರೆಗೆ ಪ್ರಕಟವಾದ ಶ್ರೇಷ್ಠ ವಿಚಾರ ಸಾಹಿತ್ಯ ಕೃತಿಗೆ ರೂ. ೫೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೧೮) ಡಾ. ವೀಣಾ ಶಾಂತೇಶ್ವರ ದತ್ತಿ‌ : ೨೦೨೫ ಜನವರಿ – ಡಿಸೆಂಬರ್‌ವರೆಗೆ ಪ್ರಕಟವಾದ ಮಹಿಳೆಯರ ಶ್ರೇಷ್ಠ ಕಥಾ ಸಂಕಲನ ಕೃತಿಗೆ ರೂ. ೫೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೧೯) ಸಾರಂಗಿ ವೆಂಕಟರಾಮಯ್ಯ ಶ್ರೀನಿವಾಸರಾವ್‌ ದತ್ತಿ: ೨೦೨೫ ಜನವರಿ – ಡಿಸೆಂಬರ್‌ವರೆಗೆ ಪ್ರಕಟವಾದ ಮಕ್ಕಳ ಸಾಹಿತ್ಯ ಕ್ಷೇತ್ರದ ಗದ್ಯ ಪ್ರಕಾರದ ‘ನಾಟಕ ಪ್ರಕಾರಕ್ಕೆ’ ಸಂಬಂಧಿಸಿದ ಕನಿಷ್ಠ ೬೫ ಪುಟಗಳುಳ್ಳ ಪುಸ್ತಕಕ್ಕೆ ರೂ. ೨೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೨೦) ಪಳಕಳ ಸೀತಾರಾಮಭಟ್ಟ ದತ್ತಿ: ೨೦೨೫ ಜನವರಿ – ಡಿಸೆಂಬರ್‌ವರೆಗೆ ಪ್ರಕಟವಾದ ಅತ್ಯುತ್ತಮ ಮಕ್ಕಳ ಸಾಹಿತ್ಯ ಕೃತಿಗೆ ರೂ.೨೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

೨೧) ಶ್ರೀಮತಿ ಜಯಲಕ್ಷ್ಮಿ ಮತ್ತು ಶ್ರೀ ಬಾಪು ರಾಮಣ್ಣ ದತ್ತಿ ಪ್ರಶಸ್ತಿ – ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಸಣ್ಣ ಕಥಾ ಸಂಕಲನಕ್ಕೆ ರೂ. ೨,೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೨೨) ದಿ| ಗೌರಮ್ಮ ಹಾಲ್ನಹಳ್ಳಿ ಕೆ. ಮಂಜಪ್ಪ ದತ್ತಿ: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಲೇಖಕಿಯರಿಂದ ರಚಿತವಾದ ಯಾವುದೇ ಪ್ರಕಾರದ ಕೃತಿಗೆ ರೂ. ೧೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೨೩) ಶ್ರೀಮತಿ ಜಯಲಕ್ಷ್ಮಮ್ಮ ಬಿ.ಎಸ್. ಸಣ್ಣಯ್ಯ ದತ್ತಿ: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಪ್ರಾಚೀನ ಸಂಪಾದಿತ ಕೃತಿಗೆ ರೂ. ೧೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು, ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.
೨೪) ಜಿ.ಆರ್‌. ರೇವಯ್ಯ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ದೀನ ದಲಿತರ ಮತ್ತು ಶೋಷಿತ ವರ್ಗಗಳ ರಕ್ಷಣೆಗೆ ಶ್ರಮಿಸುವ ವ್ಯಕ್ತಿಗಳ ಬಗ್ಗೆ ಬಂದ ಸಾಹಿತ್ಯ ಕೃತಿಗೆ ರೂ.೧೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಉದಯೋನ್ಮುಖ ಬರಹಗಾರರು ಬರಹಗಾರ್ತಿಯರು ಸ್ಪರ್ಧೆಯಲ್ಲಿ ಭಾಗವಹಿಸಬಹುದು.
೨೫) ಡಾ|| ಆ‌ರ್.ಜೆ. ಗಲಗಲಿ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಬೆಳಗಾವಿ ಜಿಲ್ಲೆಯ ಲೇಖಕರಿಂದ ರಚಿತವಾದ ಉತ್ತಮ ಕವನ ಸಂಕಲನ ಒಂದಕ್ಕೆ ರೂ. ೧೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಬೆಳಗಾವಿ ಜಿಲ್ಲೆಯ ಬರಹಗಾರರಿಗೆ ಮಾತ್ರ ಅವಕಾಶ.
೨೬) ದಿ| ಕಾಕೋಳು ಸರೋಜಮ್ಮ ದತ್ತಿ :
೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ನಾಟಕ ಪ್ರಕಾರಕ್ಕೆ ರೂ.೧೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೨೭) ನಾ.ಕು. ಗಣೇಶ್‌ ದತ್ತಿ : ೨೦೨೫ ರಲ್ಲಿ ಪ್ರಥಮ ಕವನ ಸಂಕಲನಕ್ಕೆ ರೂ.೧೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ
ಗೌರವಿಸಲಾಗುವುದು.
೨೮) ಶ್ರೀಮತಿ ಸುಮನ್‌ ಸೋಮಶೇಖರ್ ಸೋಮವಾರಪೇಟೆ ದತ್ತಿ ಪ್ರಶಸ್ತಿ‌: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಕವನ ಸಂಕಲನಕ್ಕೆ ರೂ. ೧,೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೨೯) ಶ್ರೀ ಹೇಮರಾಜ್ ಜಿ.ಎನ್. ಕುಶಾಲನಗರ ದತ್ತಿ ಪ್ರಶಸ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ ವರೆಗೂ ಪ್ರಕಟವಾದ ಸಣ್ಣ ಕಥಾ ಸಂಕಲನಕ್ಕೆ ರೂ. ೧,೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೩೦) ಮಲ್ಲಿಕಾ ಪ್ರಶಸ್ತಿ ದತ್ತಿ : ೨೦೨೫ರಲ್ಲಿ ಪ್ರಕಟವಾದ ಅತ್ಯುತ್ತಮ ಲೇಖಕಿಯರ ಕೃತಿಗೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಹಿರಿಯ-ಕಿರಿಯ ಲೇಖಕಿಯರು ಎಂಬ ವ್ಯತ್ಯಾಸವಿಲ್ಲ. ಯಾರು ಬೇಕಾದರೂ ಭಾಗವಹಿಸಬಹುದು. ಸ್ವತಂತ್ರ ಅಥವಾ ಅನುವಾದಿತ ಕೃತಿಯಾದರೂ ಆಗಬಹುದು.

೩೧) ಅಂತರರಾಷ್ಟ್ರೀಯ ಮಹಿಳಾ ವರ್ಷದ ‘ಮಹಿಳಾ ದತ್ತಿ’: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಮಹಿಳೆಯರ ಅತ್ಯುತ್ತಮ ಕೃತಿಗೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸ್ವತಂತ್ರ ಕೃತಿಯಾಗಿರಬೇಕು. ಅನುವಾದ ಕೃತಿಗಳನ್ನಾಗಲೀ, ಪುನರ್ ಮುದ್ರಣಗೊಂಡ ಕೃತಿಗಳನ್ನಾಗಲೀ ಪರಿಗಣಿಸುವುದಿಲ್ಲ.
೩೨) ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಲೇಖಕಿ ಒಬ್ಬರ ಮಹತ್ವದ ಕೃತಿಗೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೩೩) ಲಿಂ. ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಅತ್ಯುತ್ತಮ ಮಹಿಳಾ ಸಾಹಿತ್ಯದ (ಮಹಿಳೆಯರನ್ನು ಕುರಿತು ಅಥವಾ ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ರಚಿತವಾದ) ಕೃತಿಗೆ ರೂ. ೫೦೦/- ನಗದು ಬಹುಮಾನ
ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೩೪) ಶ್ರೀಮತಿ ನೀಲಗಂಗಾ ದತ್ತಿ,: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಮಹಿಳೆಯರ ಪ್ರಬಂಧ, ಕಾವ್ಯ ಮತ್ತು ಸಮಕಾಲೀನ ಮೌಲಿಕ ವಿಚಾರವುಳ್ಳ ಗ್ರಂಥಕ್ಕೆ ರೂ. ೫೦೦/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೩೫) ಶ್ರೀಮತಿ ಕೆ.ಎಸ್‌. ಭಾರತಿ ರಾಜಾರಾಮ್ ಮಧ್ಯಸ್ಥ ದತ್ತಿ: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಮಹಿಳೆಯರ ಅತ್ಯುತ್ತಮ ಕಾದಂಬರಿಗೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಕೃತಿ ಸ್ವತಂತ್ರವಾಗಿರಬೇಕು. ಅನುವಾದವಾಗಿರಬಾರದು.
೩೬) ಶ್ರೀಮತಿ ಶಾರದಾ ಆರ್. ರಾವ್ ದತ್ತಿ :‌ ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಉದಯೋನ್ಮುಖ ಮಹಿಳಾ ಬರಹಗಾರರ ಅತ್ಯುತ್ತಮ ಕೃತಿಗೆರೂ. ೨೫೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೩೭) ದಿ|| ಎಚ್. ಕರಿಯಣ್ಣ ದತ್ತಿ: ೨೦೨೫ರಲ್ಲಿ ಲೇಖಕಿಯರಿಂದ ರಚಿತವಾಗಿರುವ ಮಕ್ಕಳ ಪುಸ್ತಕಕ್ಕೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೩೮) ಡಾ|| ಎಚ್‌. ನರಸಿಂಹಯ್ಯ ದತ್ತಿ: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ವೈಚಾರಿಕ ಹಾಗೂ ವೈಜ್ಞಾನಿಕ ಮನೋಭಾವಕ್ಕೆ ಸಂಬಂಧಿಸಿದ ಶ್ರೇಷ್ಠ ಕೃತಿಗೆ ರೂ.೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೩೯) ದಿವಂಗತ ಶ್ರೀಮತಿ ಕೆ.ವಿ. ರತ್ನಮ್ಮ ದತ್ತಿ: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಉದಯೋನ್ಮುಖ ಬರಹಗಾರರ ಅತ್ಯುತ್ತಮ ಚೊಚ್ಚಲ ಪದ್ಯ ಕೃತಿ‌ ಒಂದಕ್ಕೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಯಾರು
ಬೇಕಾದರೂ ಭಾಗವಹಿಸಬಹುದು.
೪೦) ರತ್ನಾಕರವರ್ಣಿ-ಮುದ್ದಣ-ಅನಾಮಿಕ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಅತ್ಯುತ್ತಮ ಗದ್ಯ ಕೃತಿ ಒಂದಕ್ಕೆ ಹಾಗೂ ಅತ್ಯುತ್ತಮ ಪದ್ಯ ಕೃತಿ ಒಂದಕ್ಕೆ ತಲಾ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.

೪೧) ಪಿ. ಶಾಂತಿಲಾಲ್ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಜೈನ ಸಾಹಿತ್ಯ ಕುರಿತ ಯಾವುದೇ ಪ್ರಕಾರದ ಕನ್ನಡ ಪುಸ್ತಕಕ್ಕೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೪೨) ಅಕ್ಕಮ್ಮ ಗಿರಿಗೌಡ ರುದ್ರಪ್ಪ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾಗಿರುವ ಅತ್ಯುತ್ತಮವಾದ ‘ಜಾನಪದ ಸಾಹಿತ್ಯ ಕೃತಿ’ ಒಂದಕ್ಕೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೪೩) ಕುಂಬಾಸ ಪ್ರಶಸ್ತಿ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಕನ್ನಡ ಹಾಸ್ಯ ಸಾಹಿತ್ಯ ಕೃತಿಗೆ ರೂ. ೫೦೦ ನಗದು
ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. (ಹಾಸ್ಯ ಸಾಹಿತ್ಯದ ಬಗ್ಗೆ ಬರೆದಿರುವ ಪುಸ್ತಕ, ಲೇಖನ, ಚುಟುಕು ಇತ್ಯಾದಿಗಳ ಬಗ್ಗೆ ವಿವರವಾದ ಪರಿಚಯ ಬರೆದು ಕಳುಹಿಸುವುದು.)
೪೪) ಪ್ರೊ|| ಡಿ.ಸಿ. ಅನಂತಸ್ವಾಮಿ ದತ್ತಿ :
೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಅತ್ಯುತ್ತಮ ಚೊಚ್ಚಲ ಕವನ ಸಂಕಲನಕ್ಕೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.
೪೫) ‘ಸಿಸು’ ಸಂಗಮೇಶ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಅತ್ಯುತ್ತಮ ಮಕ್ಕಳ ಸಾಹಿತ್ಯ ಕೃತಿಗೆ ರೂ. ೫೦೦ ನಗದು‌ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.
೪೬) ಶ್ರೀಮತಿ ಪಂಪಮ್ಮ-ಶರಣೇಗೌಡ ವಿರುಪಾಪುರ ದತ್ತಿ: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಉತ್ತಮ ಸಾಹಿತ್ಯ ಕೃತಿಗೆ ರೂ. ೫೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. (ರಾಯಚೂರು ಜಿಲ್ಲೆಯ ಬರಹಗಾರರಿಗೆ ಮಾತ್ರ ಸೀಮಿತ)
೪೭) ಶ್ರೀ ಕೆ. ವಾಸುದೇವಾಚಾರ್ ದತ್ತಿ : ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಸಣ್ಣಕಥಾ ಸಂಕಲನ ಕೃತಿಗೆ ರೂ. ೫೦೦ ನಗದು
ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಯಾರು ಬೇಕಾದರು ಭಾಗವಹಿಸಬಹುದು.
೪೮) ಅಸುಂಡಿ ಹುದ್ದಾರ್ ಕೃಷ್ಣರಾವ್ ಸ್ಮಾರಕ ದತ್ತಿ: ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ಹರಿದಾಸ ಸಾಹಿತ್ಯ ಕುರಿತ ಕೃತಿಗೆ ರೂ. ೨೫೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೪೯) ಜಿ.ಪಿ. ರಾಜರತ್ನಂ ಸಂಸ್ಮರಣ ದತ್ತಿ: (ಮಕ್ಕಳ ಪುಸ್ತಕ ಬಹುಮಾನ ಸ್ಪರ್ಧೆ – ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬರಹಗಾರರಿಗೆ ಮಾತ್ರ ಅವಕಾಶ) ೨೦೨೫ ಜನವರಿಯಿಂದ ಡಿಸೆಂಬರ್‌ವರೆಗೂ ಪ್ರಕಟವಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬರಹಗಾರರು
ಬರೆದಿರುವ ಅತ್ಯುತ್ತಮ ಮಕ್ಕಳ ಪುಸ್ತಕಕ್ಕೆ ರೂ೨೫೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. (ಪುಸ್ತಕ ೧೫ ವರ್ಷ ವಯಸ್ಸಿನ ಒಳಗಿರುವ ಮಕ್ಕಳು ಓದುವಂತಹ ಕೃತಿಯಾಗಿರಬೇಕು).
೫೦) ಡಾ. ಜಿ. ಚಂದ್ರಮೌಳೇಶ್ವರ ದತ್ತಿ : ೨೦೨೫ ರಲ್ಲಿ ಪ್ರಕಟವಾದ ಶ್ರೇಷ್ಠ ಕಾವ್ಯ ಪ್ರಕಾರ ಕೃತಿಗೆ ರೂ. ೨೦೦೦ ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೫೧) ಶ್ರೀಮತಿ ಬೋರಮ್ಮ ಗೋವಿಂದಪ್ಪ ದತ್ತಿ: ೨೦೨೫ ರಲ್ಲಿ ಪ್ರಕಟವಾದ ಶ್ರೇಷ್ಠ ಸಣ್ಣ ಕಥಾ ಸಂಕಲನ ಪ್ರಕಾರದ ಕೃತಿಗೆ ರೂ. ೨೦೦೦ ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೫೨) ಡಾ. ರಮಾನಂದ ಮತ್ತು ಶ್ರೀಮತಿ ಶಾಂತಕುಮಾರಿ ದತ್ತಿನಿಧಿ ಯೋಜನೆ : ಪ್ರಶಸ್ತಿಯು ಕಾಸರಗೋಡು ಜಿಲ್ಲೆಗೆ ಸೀಮಿತವಾಗಿರುತ್ತದೆ.
೨೦೨೫ ರಲ್ಲಿ ಪ್ರಕಟವಾದ ಒಂದು ಕೃತಿಗೆ ಕಾವ್ಯ, ಕಥೆ, ಪ್ರಬಂಧ ಸಂಕಲನ ಎಲ್ಲವನ್ನು ಒಟ್ಟಾಗಿಯೂ ಪರಿಗಣಿಸಬಹುದು ಅಥವಾ ಒಂದೊಂದು ವರ್ಷ ಒಂದೊಂದು ಪ್ರಕಾರಕ್ಕೆ ಪ್ರಶಸ್ತಿ ನೀಡಬಹುದು. ರೂ. ೧೦,೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೫೩) ಡಾ. ಹೆಚ್.ಎಸ್. ಮದನಕೇಸರಿ ಮತ್ತು ಶ್ರೀಮತಿ ಎಂ.ಪಿ. ಗುಣಮಾಲ ದತ್ತಿ : ‘ಜೈನಧರ್ಮದ ಲೇಖಕರಿಗೆ ಮಾತ್ರ ಸೀಮಿತವಾಗಿದ್ದು, ೨೦೨೫ ರಲ್ಲಿ ಪ್ರಕಟವಾದ ಸೃಜನಾತ್ಮಕ ಕೃತಿಗಳ ಪ್ರಕಾರವಾದ ಕಾದಂಬರಿ, ಕಾವ್ಯ, ನಾಟಕ, ಪ್ರಬಂಧ,
ಜನಪದ, ಪ್ರಕಾರಗಳಿಗೆ ರೂ. ೫,೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
೫೪) ದಿ. ಪದ್ಮ ಆರ್‌. ಸ್ಮರಣಾರ್ಥ ದತ್ತಿ ಪ್ರಶಸ್ತಿ : ೨೦೨೫ರಲ್ಲಿ ಪ್ರಕಟವಾದ ಹಿಂದಿಯಿಂದ ಕನ್ನಡಕ್ಕೆ ಬಂದ ಸಾಹಿತ್ಯ, ಮಹಿಳಾ ಸಾಹಿತ್ಯ, ಮಕ್ಕಳ ಸಾಹಿತ್ಯ, ಪ್ರವಾಸ ಸಾಹಿತ್ಯ, ವಿಮರ್ಶಾತ್ಮಕ ಸಾಹಿತ್ಯ ಕೃತಿಗಳಿಗೆ ರೂ.೨೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಮೊದಲ ಆದ್ಯತೆ ಹಿಂದಿಯಿಂದ ಕನ್ನಡಕ್ಕೆ ಬಂದ ಸಾಹಿತ್ಯ ಕೃತಿಗೆ
೫೫) ಶ್ರೀ ರತ್ನಾಕರ್‌ ಪಿ. ಪುಸ್ತಕ ಪ್ರಶಸ್ತಿ ದತ್ತಿ : ೨೦೨೫ರಲ್ಲಿ ಪ್ರಕಟವಾದ ಕನ್ನಡ ಸಾಹಿತ್ಯ ಲೋಕದ ಸಂಶೋಧನೆ, ವಿಮರ್ಶೆ, ಶಾಸನ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಪುಸ್ತಕವನ್ನು ಆಯ್ಕೆ ಮಾಡಿ ರೂ.೫,೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಮೇಲ್ಕಂಡ ಎಲ್ಲ ಸ್ಪರ್ಧೆಗಳಿಗೂ ಅನ್ವಯಿಸುವ ನಿಯಮಗಳು: ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಮಾನ್ಯ ಆಡಳಿತಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು – ೫೬೦೦೧೮. ಇವರಿಗೆ , ದಿನಾಂಕ: ೨೦-೦೬-೨೦೨೬ರ ಒಳಗೆ ತಲುಪುವಂತೆ ಕಳುಹಿಸಬೇಕು. ತಡವಾಗಿ ಬಂದ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ಪರಿಶೀಲನೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸನ್ನು ಗಮನಿಸಿ ಪರಿಷತ್ತು ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಯಾವುದೇ ಪುಸ್ತಕ ಪ್ರಶಸ್ತಿ ಪುರಸ್ಕೃತರು ಪ್ರಶಸ್ತಿ ಪಡೆದ ವಿಭಾಗಕ್ಕೆ ೩ ವರ್ಷ ಅರ್ಜಿ ಸಲ್ಲಿಸುವಂತಿಲ್ಲ. ಯಾವುದೇ ಪುಸ್ತಕ ದತ್ತಿ ಪುರಸ್ಕಾರ ಬರಹಗಾರರಿಗೆ ೩ ಸಲ ಬಂದಿದ್ದೇ ಆದರೆ ಜೀವಮಾನ ಪೂರ್ತಿ ದತ್ತಿ ಪುರಸ್ಕಾರಕ್ಕೆ ಅವರು ಅರ್ಜಿ ಸಲ್ಲಿಸುವಂತಿಲ್ಲ. ಯಾವುದೇ ಪ್ರಶಸ್ತಿಗೆ ಅರ್ಹ ಗ್ರಂಥಗಳು ಬಾರದಿದ್ದಾಗ ಆ ವರ್ಷ ಪ್ರಶಸ್ತಿಯನ್ನು ನೀಡದಿರುವ ಹಕ್ಕು ಪರಿಷತ್ತಿಗೆ ಇರುತ್ತದೆ.
ಒಂದಕ್ಕಿತ ಹೆಚ್ಚು ಗ್ರಂಥಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗೆ ಇರುತ್ತದೆ. ಪಿಎಚ್.ಡಿ. ಗ್ರಂಥಗಳು ಹಾಗೂ ನಿಘಂಟುಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ. ಭಾಗವಹಿಸುತ್ತಿರುವ ಸ್ಪರ್ಧೆಯ ದತ್ತಿ ಹೆಸರನ್ನು ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ಸೂಚಿಸತಕ್ಕದ್ದು. ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬಹುದು. ಪ್ರತಿ ಪುಸ್ತಕ ದತ್ತಿ ಪ್ರಶಸ್ತಿಗಳಿಗೂ ತಲಾ ಮೂರು ಪ್ರತಿಗಳನ್ನು ಕಳುಹಿಸಬೇಕು ಕಸಾಪ ಆಡಳಿತಾಧಿಕಾರಿಗಳಾದ ಕೆ.ಎ. ದಯಾನಂದ, (ಭಾ.ಆ.ಸೇ.) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About ಬಿ.ಎನ್‌. ವಾಸರೆ 692 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*