ಅಮೃತ ಮಹೋತ್ಸವ ಸಮಿತಿಯಿಂದ ವಾಸರಕುದ್ರಿಗೆ ಶಾಲಾ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಅಂಕೋಲಾ ತಾಲೂಕಿನ ವಾಸರಕುದ್ರಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಅಮೃತ ಮಹೋತ್ಸವ ಸಮಿತಿಯ ವತಿಯಿಂದ ಸ್ಕೂಲ್ ಬ್ಯಾಗ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮೃತ ಮಹೋತ್ಸವ ಸಮಿತಿಯ ಪ್ರಮುಖರಾದ ಗೋಪಾಲಕೃಷ್ಣ ನಾಯಕ (ಕಾಂತ ಮಾಸ್ತರ), ವಾಸರಕುದ್ರಿಗೆ ಗ್ರಾಮ ಪಂಚಾಯತನ ನಿಕಟ ಪೂರ್ವ ಅಧ್ಯಕ್ಷ ಪ್ರದೀಪ ಎನ್. ನಾಯಕ (ಪರಿ), ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಶಾಂತ ಎಸ್. ನಾಯಕ, ಅವರು ವಾಸರಕುದ್ರಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು 80 ವರ್ಷಗಳಿಗಿಂತ ಹೆಚ್ಚಿನ ಇತಿಹಾಸವನ್ನು ಹೊಂದಿದ ಶಾಲೆಯಾಗಿದ್ದು, ಈ ಹಳೆಯ ಶಾಲೆಯನ್ನ ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಹಲವು ಕಾಣಗಳಿಂದ ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಮುಂದಿನ ವರ್ಷ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಕೆಲಸವನ್ನು ಶಿಕ್ಷಕರು, ಪಾಲಕರು ಸೇರಿದ ಹಾಗೆ ಎಲ್ಲರೂ ಮಾಡಬೇಕಾಗಿದೆ. ಮುಂದಿನ ವರ್ಷದಿಂದ ಹೊಸದಾಗಿ ಪ್ರವೇಶವನ್ನು ಪಡೆಯುವ ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಅಮೃತ ಮಹೋತ್ಸವ ಸಮಿತಿಯಿಂದ ಪ್ರೋತ್ಸಾಹ ಧನವನ್ನು ನೀಡುವ ವ್ಯವಸ್ಥೆಯನ್ನು ಕೂಡ ಮಾಡುವ ವಿಚಾರವಿದೆ ಎಂದರು.

ಇದೇ ಸಂದರ್ಭದಲ್ಲಿ ಶಾಲಾ ಅಮೃತ ಮಹೋತ್ಸವ ಸಮಿತಿಯ ಪ್ರಮುಖರಾದ ನಾರಾಯಣ ಎಚ್. ನಾಯಕರವರು ತಮ್ಮ ಸ್ವಂತ ಖರ್ಚಿನಿಂದ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಆರ್.ಎಸ್. ನಾಯಕ, ಪ್ರಮುಖರಾದ ನೀಲಕಂಠ ಡಿ. ನಾಯಕ, ಪ್ರಮುಖರಾದ ಮನೋಹರ ಎಂ. ನಾಯಕ, ಸೋಮಶೇಖರ ನಾಯಕ, ಯುವಕ ಸಂಘದ ಅಧ್ಯಕ್ಷ ನೇಸರ ನಸಯಕ, ಪ್ರಸನ್ನ ನಾಯಕ, ವೆಂಕಟ್ರಮಣ ಆಗೇರ, ಅಭಿ ಮಂಜುನಾಥ ನಾಯಕ, ಗಿರೀಶ ನಾಯಕ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ಶಾಲೆಯ ಮಕ್ಕಳಾದ ತಮಗೆ ಗುಣಮಟ್ಟದ ಸ್ಕೂಲ್ ಬ್ಯಾಗನ್ನು ನೀಡಿ ಸಹಕರಿಸಿದ ಅಮೃತ ಮಹೋತ್ಸವ ಸಮಿತಿಯ ಕಾರ್ಯಕ್ಕೆ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು. ಮುಖ್ಯಾಧ್ಯಾಪಕ ಅರುಣ ನಾಯ್ಕ ಸ್ವಾಗತಿಸಿದರು. ಶಿಕ್ಷಕ ವಿನಾಯಕ ಹೆಗಡೆ ವಂದಿಸಿದರು. ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು.

About ಬಿ.ಎನ್‌. ವಾಸರೆ 712 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*